HomeLatest NewsPGNEET-25: ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಇಲ್ಲಿದೆ ಮುಖ್ಯ ಮಾಹಿತಿ

PGNEET-25: ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) PGNEET-25 ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ್ದು, ಸೀಟು ರದ್ದು ಮಾಡಿಕೊಳ್ಳುವವರು ಯಾವ ಹಂತದಲ್ಲಿ ಎಷ್ಟೆಷ್ಟು ದಂಡ ಕಟ್ಟಬೇಕು ಎಂಬುದರ ಪಟ್ಟಿ ಇಲ್ಲಿದೆ. ಇದನ್ನು ಒಮ್ಮೆ ನೋಡಿ ದಂಡದಿಂದ ಪಾರಾಗುವ ಎಚ್ಚರವಹಿಸಲು ತಿಳಿಸಲಾಗಿದೆ.

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ‌ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗಿದೆ. ಇದು ಸೇವಾ ನಿರತರಲ್ಲದವರ ಫಲಿತಾಂಶ. ಛಾಯ್ಸ್ ದಾಖಲಿಸಲು ಡಿ.2ರವರೆಗೆ, ಛಾಯ್ಸ್-1 & 2 ದಾಖಲಿಸಿದವರು ಡಿ.4ರೊಳಗೆ ಶುಲ್ಕ ಪಾವತಿಸಬೇಕು. ಛಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಡಿ.2ರಿಂದ 5ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಬೇಕು. ಮೂಲ ದಾಖಲೆ ಸಲ್ಲಿಸಿದ ನಂತರ ಡಿ.6ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular