
ಈ ಬಾರಿ 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆಯಿದ್ದು. ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ. ಶಾಲಾ ಮಕ್ಕಳಿಗೆ ಪ್ರವೇಶ ಉಚಿತವಾಗಿರಲಿದೆ, ಹಾಗೂ ಮಕ್ಕಳಿಗಾಗಿ ವಿವಿಧ ಸ್ಪರ್ಧೆ ಏರ್ಪಡಿಸಿದ್ದೇವೆ ಎಂದರು. ಫ್ಲವರ್ ಶೋಗೆ ಈ ಬಾರಿ ಟಿಕೆಟ್ ದರ ಜಾಸ್ತಿ ಮಾಡಿಲ್ಲ. ಸಾಮಾನ್ಯ ದಿನಗಳಲ್ಲಿ ಹಿರಿಯರಿಗೆ 70 ರುಪಾಯಿ ಹಾಗೂ ಮಕ್ಕಳಿಗೆ 30 ರುಪಾಯಿ ನಿಗದಿ ಮಾಡಿದ್ದೇವೆ. ಭದ್ರತೆಗಾಗಿ 200 ಸಿಸಿ ಟಿವಿ ಕ್ಯಾಮರಾಗಳನ್ನ ಅಳವಡಿಕೆ ಮಾಡಿದ್ದೇವೆ. ಏಕ-ಬಳಕೆಯ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸದಂತೆ, ಕಸವನ್ನು ಕಸದ ತೊಟ್ಟಿಗಳಲ್ಲಿ ಎಸೆಯದಂತೆ ಮತ್ತು ಕಾರ್ಯಕ್ರಮದ ಅಂತ್ಯದ ವೇಳೆಗೆ ಉದ್ಯಾನವು ಹಾಳಾಗದಂತೆ ನೋಡಿಕೊಳ್ಳಲು ನಾವು 150 ಗ್ರೌಂಡ್ ಸಿಬ್ಬಂದಿಯನ್ನು ನಿಯೋಜಿಸಲು ಯೋಜಿಸಿದ್ದೇವೆ ” ಎಂದು ಲಾಲ್ ಬಾಗ್ ನ ತೋಟಗಾರಿಕೆ ಉಪ ನಿರ್ದೇಶಕಿ ಕುಸುಮಾ ಜಿ ಹೇಳಿದರು.
12 ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮ ಆಗಸ್ಟ್ 4ರಿಂದ ಆರಂಭವಾಗಲಿದೆ , ಕಳೆದ ವರ್ಷ ಈ ಕಾರ್ಯಕ್ರಮವು ಪ್ಲಾಸ್ಟಿಕ್ ರಹಿತ ಕಾರ್ಯಕ್ರಮವಾಗಿದ್ದರೂ, ಈ ವರ್ಷ ನಿಯಮಗಳನ್ನು ಹೆಚ್ಚು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಈ ಕಾರ್ಯಕ್ರಮದಲ್ಲಿ ಸ್ಟೀಲ್ ಬಾಟಲಿಗಳು ಅಥವಾ ಮರುಬಳಕೆ ಮಾಡಬಹುದಾದ ನೀರಿನ ಬಾಟಲಿಗಳನ್ನು ಮಾತ್ರ ಅನುಮತಿಸಲಾಗುವುದು ಎಂದರು.

