ಸಹಾಯಕ ಪ್ರಾಧ್ಯಾಪಕರಿಗೆ ಪಿಹೆಚ್‌ಡಿ ಕಡ್ಡಾಯವಲ್ಲ; NET, SET, SLET ಮುಖ್ಯ ಮಾನದಂಡ: ಯುಜಿಸಿ ಘೋಷಣೆ

ನವದೆಹಲಿ: ಸಹಾಯಕ ಪ್ರಾಧ್ಯಾಪಕರಾಗಲು ಪಿಹೆಚ್‌ಡಿ ಐಚ್ಛಿಕವಾಗಲಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ಬುಧವಾರ ಪ್ರಕಟಿಸಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ(NET), ರಾಜ್ಯ ಅರ್ಹತಾ ಪರೀಕ್ಷೆ(SET) ಮತ್ತು ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ(SLET) ಕನಿಷ್ಠ ಮಾನದಂಡವಾಗಿದೆ ಎಂದು UGC ಪ್ರಕಟಿಸಿದೆ.

ಯುಜಿಸಿ ಅಧ್ಯಕ್ಷ ಪ್ರೊ ಎಂ ಜಗದೇಶ್ ಕುಮಾರ್, ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿಗಾಗಿ ಪಿಹೆಚ್‌ಡಿ ಅರ್ಹತೆ ಜುಲೈ 1, 2023 ರಿಂದ ಐಚ್ಛಿಕವಾಗಿರುತ್ತದೆ. ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ NET/SET/SLET ಕನಿಷ್ಠ ಮಾನದಂಡವಾಗಿದೆ ಎಂದು ಹೇಳಿದ್ದಾರೆ.

ವಿಶ್ವವಿದ್ಯಾನಿಲಯ ಅನುದಾನ ಆಯೋಗ(ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಇತರ ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ನಿರ್ವಹಿಸುವ ಇತರ ಕ್ರಮಗಳು) ನಿಯಮಗಳು, 2018′ ಗೆ ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ಜೂನ್ 30 ರ ಯುಜಿಸಿ ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

UGC-NET ಪರೀಕ್ಷೆಗಳ ಅಂತಿಮ ಫಲಿತಾಂಶಗಳು ಆಗಸ್ಟ್ ಎರಡನೇ ವಾರದಲ್ಲಿ ಹೊರಬರುತ್ತವೆ. ಭಾರತೀಯ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ‘ಅಸಿಸ್ಟೆಂಟ್ ಪ್ರೊಫೆಸರ್’ ಮತ್ತು ‘ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್’ ಆಕಾಂಕ್ಷಿಗಳ ಅರ್ಹತೆಯನ್ನು ಪರೀಕ್ಷೆಯು ನಿರ್ಧರಿಸುತ್ತದೆ.

ಯುಜಿಸಿ-ನೆಟ್ ಅನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್‌ಟಿಎ) ಡಿಸೆಂಬರ್ 2018 ರಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆ(ಸಿಬಿಟಿ) ಮೋಡ್‌ನಲ್ಲಿ ನಡೆಸುತ್ತಿದೆ. ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುತ್ತದೆ. ಜುಲೈ 2023 ರವರೆಗೆ ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿಗೆ ಪಿಎಚ್‌ಡಿ ಕಡ್ಡಾಯವಲ್ಲ ಎಂದು 2021 ರಲ್ಲಿ ಯುಜಿಸಿ ಘೋಷಿಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read