HomeKarnatakaPhD ಗೊಂದಲ: 452 ಅತಿಥಿ ಉಪನ್ಯಾಸಕರಿಗೆ Notice

PhD ಗೊಂದಲ: 452 ಅತಿಥಿ ಉಪನ್ಯಾಸಕರಿಗೆ Notice

ಬೆಂಗಳೂರು: ಪಿಎಚ್‌ಡಿ ಅರ್ಹತೆ ಕುರಿತು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025 -26 ನೇ ಸಾಲಿನಲ್ಲಿ ನೇಮಕವಾಗಿದ್ದ ಅತಿಥಿ ಉಪನ್ಯಾಸಕರಿಗೆ ನೋಟಿಸ್ ನೀಡಲಾಗಿದೆ.

ಪಿಎಚ್‌ಡಿ ಅರ್ಹತೆ ಕುರಿತಂತೆ ಪರಿಶೀಲನೆ ನಡೆಸಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಯುಜಿಸಿ ನಿಗದಿಪಡಿಸಿದ ಪಿಎಚ್‌ಡಿ ವಿದ್ಯಾರ್ಹತೆ ಕುರಿತು ಸತ್ಯಾಸತ್ಯತೆ ಪರಿಶೀಲನೆಗೆ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ಪಿಎಚ್‌ಡಿ ವಿದ್ಯಾರ್ಹತೆ ವಿವರಗಳ ಮಾಹಿತಿಯಲ್ಲಿ ಗೊಂದಲ ಸೃಷ್ಟಿಸಿದ ವಿವಿಧ ಕಾಲೇಜುಗಳ 452 ಅತಿಥಿ ಉಪನ್ಯಾಸಕರಿಗೆ ನೋಟಿಸ್ ನೀಡಲಾಗಿದೆ.

2025 -26ನೇ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಈ ಅಭ್ಯರ್ಥಿಗಳು ಪಿಎಚ್‌ಡಿ ಅರ್ಹತೆ ವಿದ್ಯಾರ್ಹತೆ ಹೊಂದಿರುವುದಾಗಿ ಅರ್ಜಿಯಲ್ಲಿ ನಮೂದಿಸಿದ್ದಾರೆ. ನಂತರ ವಿವಿಧ ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಗೆ ಸೇರ್ಪಡೆಯಾಗಿದ್ದಾರೆ. ಈಗ 2026 -27ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ಆನ್ಲೈನ್ ಮೂಲಕ ಅರ್ಜಿ ಪರಿಶೀಲಿಸಿದಾಗ ಪಿಎಚ್‌ಡಿ ವಿದ್ಯಾರ್ಹತೆ ಕ್ಲೇಮ್ ಮಾಡದೇ ಇರುವುದು ಕಂಡು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಪಿಎಚ್‌ಡಿ ಅರ್ಹತೆ ಬಗ್ಗೆ ಸೂಕ್ತ ದಾಖಲೆ ಒದಗಿಸುವಂತೆ ತಿಳಿಸಲಾಗಿದೆ. ನೋಟಿಸ್ ನೀಡಿದ ಅತಿಥಿ ಉಪನ್ಯಾಸಕರಲ್ಲಿ ಹೆಚ್ಚಿನವರು ಉತ್ತರ ಕರ್ನಾಟಕದ ಕಲಬುರಗಿ, ಜಮಖಂಡಿ, ಸೇಡಂ, ಯಾದಗಿರಿ, ಬೀದರ್, ಹುಬ್ಬಳ್ಳಿ, ರಾಯಚೂರು, ಅಥಣಿಗೆ ಸೇರಿದವರಾಗಿದ್ದಾರೆ. ಉಳಿದಂತೆ ಬೆಂಗಳೂರು ಪೂರ್ವ, ವಿಜಯನಗರ, ಯಲಹಂಕ ಸೇರಿ ಕೆಲವು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ನೋಟಿಸ್ ನೀಡಲಾಗಿದ್ದು, ನೋಟಿಸ್ ತಲುಪಿದ ಏಳು ದಿನಗಳ ಒಳಗೆ ಲಿಖಿತ ಹೇಳಿಕೆ ವಿವರಣೆ ಪಡೆದುಕೊಳ್ಳಲು ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ.

ಪಿಎಚ್‌ಡಿ ಅರ್ಹತೆ ಕುರಿತಂತೆ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ದಾಖಲೆ ಪರಿಶೀಲಿಸಿ ಮಾಹಿತಿ ಒದಗಿಸಲು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದು, ಒಂದು ವೇಳೆ ದಾಖಲೆ ಸಲ್ಲಿಸಲು ವಿಫಲವಾದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಸೆ. 25 ರಿಂದ 27 ರವರೆಗೆ ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ

ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಯೋಜಿಸಿರುವ “ಕಲಾ ಸಂಗಮ” ಕಾರ್ಯಕ್ರಮದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರವು ದಿನಾಂಕ: 25.09.2026 ರಿಂದ 27.09.2026ರವರೆಗೆ “ಕಲಾ ಸಂಗಮ ಕನ್ನಡ ಪುಸ್ತಕ ಮಾರಾಟ ಮೇಳ-2026”ನ್ನು ರವೀಂದ್ರ ಕಲಾಕ್ಷೇತ್ರ ಆವರಣ, ಜೆ.ಸಿ. ರಸ್ತೆ, ಬೆಂಗಳೂರು ಇಲ್ಲಿ ಏರ್ಪಡಿಸಿದೆ.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000-00 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿಡಿ ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಕಚೇರಿ ಅಥವಾ ಪ್ರಾಧಿಕಾರದ ವೆಬ್‌ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ದಿನಾಂಕ:22.09.2026  ರಂದು ಸಂಜೆ 5.00 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಇವರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ಸಲ್ಲಿಸಲು ಕೋರಿದೆ. ಸೀಮಿತ ಮಳಿಗೆಗಳು ಲಭ್ಯವಿರುವುದರಿಂದ ಮೊದಲು ಪ್ರಾಧಿಕಾರದಲ್ಲಿ ಸ್ವೀಕೃತವಾದ ಅರ್ಜಿಗಳಿಗೆ ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ  ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ದೂ:080-22484516 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular