HomeKarnatakaಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಅಕ್ಕಮಹಾದೇವಿ ವಿವಿ ಮ್ಯಾನೇಜ್ಮೆಂಟ್ ವಿಭಾಗದ ಪ್ರೊಫೇಸರ್ ಅಮಾನತ್ತಿಗೆ...

ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಅಕ್ಕಮಹಾದೇವಿ ವಿವಿ ಮ್ಯಾನೇಜ್ಮೆಂಟ್ ವಿಭಾಗದ ಪ್ರೊಫೇಸರ್ ಅಮಾನತ್ತಿಗೆ ಆಗ್ರಹ

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಹೆಚ್ ಒಡಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ವಿರುದ್ಧ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ರನ್ನು ಅಮಾನತು ಮಾಡಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ವಿವಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರೊಫೇಸರ್ ವಿರುದ್ಧ ಧಿಕ್ಕಾರ ಕುಗಿದ್ದಾರೆ.

ಪ್ರೊ.ಮಲ್ಲಿಕಾರ್ಜುನ ರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಪಿ ಹೆಚ್ ಡಿ ವಿದ್ಯಾರ್ಥಿನಿ ಕುಲಪತಿ ಪ್ರೊ.ತುಳಸಿಮಾಲಾ ಅವರಿಗೆ ದೂರು ನೀಡಿದ್ದು, ದೂರಿನ ಬಗ್ಗೆ ತನಿಖೆ ನಡೆಸುವಂತೆ ಆಂತರಿಗ ದೂರು ಸಮಿತಿಗೆ ವಿಸಿ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular