HomeKarnatakaBREAKING : 'ನಗ್ನ ಚಿತ್ರ' ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ : ಬೆಂಗಳೂರಿನಲ್ಲಿ ಖಾಸಗಿ ಚಾನೆಲ್...

BREAKING : ‘ನಗ್ನ ಚಿತ್ರ’ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ : ಬೆಂಗಳೂರಿನಲ್ಲಿ ಖಾಸಗಿ ಚಾನೆಲ್ ಕ್ಯಾಮರಾ’ಮೆನ್ ಆತ್ಮಹತ್ಯೆ.!

ಬೆಂಗಳೂರು: ಆಪ್ ಮೂಲಕ ಸಾಲ ಪಡೆದುಕೊಂಡಿದ್ದ ಕ್ಯಾಮರಾಮೆನ್ ಓರ್ವರಿಗೆ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಕಿರಣ್ (32) ಆತ್ಮಹತ್ಯೆಗೆ ಶರಣಾಗಿರುವ ಕ್ಯಾಮರಾಮೆನ್, ಖಾಸಗಿ ಚಾನಲ್ ವೊಂದರಲ್ಲಿ ಕ್ಯಾಮರಾಮೆನ್ ಆಗಿ ಕೆಲಸ ಮಾಡುತ್ತಿದ್ದ ಕಿರಣ್ ಆಪ್ ವೊಂದರ ಮೂಲಕ 2 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಸಾಲದ ಹಣ ವಾಪಾಸ್ ನೀಡದಿದ್ದರೆ ನಗ್ನ ಚಿತ್ರ ವೈರಲ್ ಮಾಡುವುದಾಗಿ ಕಿಡಿಗೇಡಿಗಳು ಬೆದರಿಕೆ ಹಾಕಿದ್ದರು.

ಫೋಟೋ ಎಡಿಟ್ ಮಾಡಿ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಕಿರುಕುಳಕ್ಕೆ ಮನನೊಂದ ಕಿರಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular