BIG NEWS: ಮದುವೆಗೆ ಬಂದಿದ್ದ ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ: ಮಹಿಳೆ ಸೇರಿ 8 ಜನರು ಅರೆಸ್ಟ್

ಬೆಳಗಾವಿ: ಮದುವೆಗೆ ಬಂದಿದ ಫೋಟೋಗ್ರಾಫರ್ ಓರ್ವರನ್ನು ಕಿಡ್ನ್ಯಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಉಮೇಶ್ ಹಲ್ಲೆಗೊಳಗಾದ ಫೋಟೋಗ್ರಾಫರ್. ಬೈಲಹೊಂಗಲ ಪಟ್ಟಣದಲ್ಲಿ ವಾಸವಾಗಿದ್ದ ಉಮೇಶ್, ಬೆಳಗಾವಿ ನಗರದ ಕೆಪಿಟಿಸಿಎಲ್ ಕಲ್ಯಾಣ ಮಂಟಪಕ್ಕೆ ಮದುವೆಗೆ ಆರ್ಡರ್ ಇದೆ ಎಂದು ನಾಲ್ಕು ದಿನಗಳ ಹಿಂದೆ ಬೆಳಗಾವಿಗೆ ಬಂದಿದ್ದ. ಈ ವೇಳೆ ಉಮೇಶ್ ನನ್ನು ಕಿಡ್ನ್ಯಾಪ್ ಮಾಡಿದ್ದ ನಾವರ ಗುಂಪು ಮಾರಣಾಂತಿಕವಾಗಿ ರಾಡ್ ನಿಂದ ಹಲ್ಲೆ ನಡೆಸಿ ಬೈಲಹೊಂಗಲ ತಾಲೂಕಿನ ಚವಟಗುಂಡಿ ಕ್ರಾಸ್ ಬಳಿ ಕಾರು ನಿಲ್ಲಿಸಿ ಬಿಟ್ಟು ಹೋಗಿದ್ದರು.

ುಮೇಶ್ ಹೆಣ್ಣುಮಕ್ಕಳನ್ನು ಕಾಡಿಸುತ್ತಿದ್ದ ಎಂಬ ಕಾರಣಕ್ಕೆ ಆತನನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 8 ಜನರ ವಿರುದ್ಧ ಮಾಳಮಾರುತಿ ಠಾಣೆಯಲ್ಲಿ ಕೇಸ್ ದಾಖಲಗೈತ್ತು. ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 8 ಜನರನ್ನು ಬಂಧಿಸಲಾಗಿದೆ.

ವಿಕ್ಕಿ, ಪ್ರವೀಣ್, ಉಮಾರಾಣಿ, ಬಸವರಾಜ್ ನರಟ್ಟಿ ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಹಲ್ಲೆಗೊಳಗಾದ ಉಮೇಶ್ ಬೈಲಹೊಂಗಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read