HomeKarnatakaಸಹ ಶಿಕ್ಷಕರಂತೆ ಪರಿಗಣಿಸಿ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಆ. 29 ರಂದು ದೈಹಿಕ ಶಿಕ್ಷಕರ ಪ್ರತಿಭಟನೆ

ಸಹ ಶಿಕ್ಷಕರಂತೆ ಪರಿಗಣಿಸಿ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಆ. 29 ರಂದು ದೈಹಿಕ ಶಿಕ್ಷಕರ ಪ್ರತಿಭಟನೆ

ಬೆಂಗಳೂರು: ಪ್ರೊ. ಎಲ್.ಆರ್. ವೈದ್ಯನಾಥ್ ವರದಿ ಅನ್ವಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಿ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಬೇಕು. ಶಿಕ್ಷಕರಿಗೆ ಸಿಗುವಂತೆ ಎಲ್ಲಾ ಸೌಲಭ್ಯಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಆಗಸ್ಟ್ 29ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಪ್ರತಿಭಟನೆ ಕೈಗೊಂಡಿದ್ದಾರೆ.

ಕಳೆದ 17 ವರ್ಷಗಳಿಂದ ಬೇಡಿಕೆ ಈಡೇರಿಸಿಲ್ಲ. ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಇಲಾಖೆ ಪರಿಗಣಿಸಿಲ್ಲ. ಇದುವರೆಗೂ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ಸೇರಿದಂತೆ ಸಹ ಶಿಕ್ಷಕರಿಗೆ ಸಿಗುವ ಸೌಲಭ್ಯಗಳನ್ನು ದೈಹಿಕ ಶಿಕ್ಷಣ ಶಿಕ್ಷಕರಿಗೆ ನೀಡುವ ಇಲಾಖೆ ಆದೇಶ ಅನುಷ್ಠಾನವಾಗಿಲ್ಲ ಎಂದು ಹೇಳಲಾಗಿದೆ.

ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಎಸ್. ಚೌಡಪ್ಪ ಅಸಮಾಧಾನ ವ್ಯಕ್ತಪಡಿಸಿದ್ದು, ಸಮಾನ ವೇತನ, ಸಮಾನ ವಿದ್ಯಾರ್ಹತೆ, ಒಂದೇ ನೇಮಕಾತಿ ವಿಧಾನವಿದ್ದರೂ ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರಲ್ಲಿ ತಾರತಮ್ಯ ಧೋರಣೆ ಮಾಡಲಾಗುತ್ತಿದೆ. ಕೆಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮಟ್ಟದಲ್ಲಿ ಆದೇಶವಾಗಿದ್ದರೂ ವಿಳಂಬ ಅನುಸರಿಸಲಾಗುತ್ತಿದೆ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular