15 ವರ್ಷದ ಪತ್ನಿಯೊಂದಿಗಿನ ದೈಹಿಕ ಸಂಬಂಧ ಅತ್ಯಾಚಾರ ಎಂದು ಹೇಳಲು ಸಾಧ್ಯವಿಲ್ಲ: ವಿಚಾರಣಾ ಕೋರ್ಟ್ ತೀರ್ಪು ಎತ್ತಿ ಹಿಡಿದ ಹೈಕೋರ್ಟ್

ನವದೆಹಲಿ: ಪತ್ನಿಯೊಂದಿಗಿನ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಪರಿಗಣಿಸಲಾಗದು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ಕುರಿತಾಗಿ ದೆಹಲಿ ಪೊಲೀಸರ ಮೇಲ್ಮನವಿಯನ್ನು ವಜಾಗೊಳಿಸಿದೆ. 15 ವರ್ಷ ವಯಸ್ಸಿನ ಪತ್ನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ ಪತಿಯನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದ್ದು, ಈ ತೀರ್ಪನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದು ದೆಹಲಿ ಪೊಲೀಸರ ಮೇಲ್ಮನವಿ ತಳ್ಳಿ ಹಾಕಿದೆ.

ಅಪ್ರಾಪ್ತ ಪುತ್ರಿ ಮೇಲೆ ಅತ್ಯಾಚಾರ ನಡೆದಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ ಎಂದು 2015ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು. ಇದರ ಆಧಾರದ ಮೇಲೆ ಮುಸ್ಲಿಂ ವ್ಯಕ್ತಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿತ್ತು. 2014ರ ಡಿಸೆಂಬರ್ ನಲ್ಲಿ ಮದುವೆಯಾಗಿ ನಂತರ ದೈಹಿಕ ಸಂಬಂಧ ಹೊಂದಿರುವುದಾಗಿ ಬಾಲಕಿ ವಿಚಾರಣಾ ನ್ಯಾಯಾಲಯಕ್ಕೆ ಸಾಕ್ಷ್ಯ ಹೇಳಿದ್ದರು. ಇದನ್ನು ಪರಿಗಣಿಸಿ ಎರಡನೇ ಪತ್ನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮುಸ್ಲಿಂ ವ್ಯಕ್ತಿ ತಪ್ಪಿತಸ್ಥನಲ್ಲ. ಆತ ನ್ಯಾಯಬದ್ಧವಾಗಿಯೇ ಖುಲಾಸೆಯಾಗಿರುವುದಾಗಿ ವಿಚಾರಣಾ ನ್ಯಾಯಾಲಯ ಘೋಷಣೆ ಮಾಡಿದೆ.

ವಿಚಾರಣೆ ನ್ಯಾಯಾಲಯದ ಈ ತೀರ್ಪನ್ನು ದೆಹಲಿ ಪೊಲೀಸರು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್, ನೀನಾ ಬಾನ್ಸಲ್ ಕೃಷ್ಣ ಅವರ ಪೀಠ ಎತ್ತಿ ಹಿಡಿದಿದೆ. ದೆಹಲಿ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

ಬಾಲಕಿ 15 ವರ್ಷ ವಯಸ್ಸಿನವಳಾಗಿದ್ದಾಳೆ, ಆರೋಪಿ ಪತಿ ಮತ್ತು ಪತ್ನಿ ನಡುವಿನ ದೈಹಿಕ ಸಂಬಂಧವನ್ನು ಅತ್ಯಾಚಾರ ಎಂದು ಕರೆಯಲಾಗುವುದಿಲ್ಲ. ಐಪಿಸಿ ಸೆಕ್ಷನ್ 375ರಲ್ಲಿ ನೀಡಲಾಗಿರುವ ವಿನಾಯಿತಿಯ ಅನ್ವಯ ವ್ಯಕ್ತಿ 15 ವರ್ಷಕ್ಕಿಂತ ಕಡಿಮೆ ಇಲ್ಲದ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read