BREAKING NEWS: ಪ್ರಪಾತಕ್ಕೆ ಬಿದ್ದ ಪಿಕಪ್ ವಾಹನ: ಮೂವರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಪಿಕಪ್ ವಾಹನ ಪ್ರಪಾತಕ್ಕೆ ಬಿದ್ದು ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಬೆಟ್ಟದ ಮಳಲಿ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಅದೃಷ್ಟವಶಾತ್ 16 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆವತಿ ಗ್ರಾಮದ ಸಂತೆಗೆ ಹೋಗಿ ವಾಪಾಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read