HomeKarnatakaBREAKING NEWS: ಪ್ರಪಾತಕ್ಕೆ ಬಿದ್ದ ಪಿಕಪ್ ವಾಹನ: ಮೂವರಿಗೆ ಗಂಭೀರ ಗಾಯ

BREAKING NEWS: ಪ್ರಪಾತಕ್ಕೆ ಬಿದ್ದ ಪಿಕಪ್ ವಾಹನ: ಮೂವರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಪಿಕಪ್ ವಾಹನ ಪ್ರಪಾತಕ್ಕೆ ಬಿದ್ದು ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಬೆಟ್ಟದ ಮಳಲಿ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಅದೃಷ್ಟವಶಾತ್ 16 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆವತಿ ಗ್ರಾಮದ ಸಂತೆಗೆ ಹೋಗಿ ವಾಪಾಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular