HomeKarnatakaಪಿಕಪ್ ವಾಹನ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಪಿಕಪ್ ವಾಹನ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಪಿಕಪ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ.

ಮುರುಗೇಶ್ ಚಂದ್ರಶೇಖರ್ ಉಪ್ಪಿನ (42) ಹಾಗೂ ಯಮುನಪ್ಪ (60) ಮೃತ ದುರ್ದೈವಿಗಳು. ಮುರುಗೇಶ್ ಹೆಚ್ ಡಿ ಎಪ್ ಸಿ ಗೋಲ್ಡ್ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಕಲಬುರಗಿ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular