HomeKarnatakaBIG NEWS: ಸರ್ಕಾರಿ ಬಸ್ ಗಳಲ್ಲಿ ನಿಲ್ದಾಣದ ವಿವರ ಘೋಷಣೆ ಕೋರಿ ಪಿಐಎಲ್: ಸಕಾರಾತ್ಮಕ ಪ್ರತಿಕ್ರಿಯೆ...

BIG NEWS: ಸರ್ಕಾರಿ ಬಸ್ ಗಳಲ್ಲಿ ನಿಲ್ದಾಣದ ವಿವರ ಘೋಷಣೆ ಕೋರಿ ಪಿಐಎಲ್: ಸಕಾರಾತ್ಮಕ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ನಿಲ್ದಾಣದ ವಿವರ ಘೋಷಣೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದೆ.

ದೃಷ್ಟಿದೋಷ ಇರುವವರಿಂದ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದ್ದು, ನವೆಂಬರ್ 9 ರೊಳಗೆ ಸರ್ಕಾರದ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ನಿಲ್ದಾಣದ ಪ್ರಕಟಣೆ ಹೊರಡಿಸುತ್ತಿದ್ದರು. ಇದರಿಂದ ದೃಷ್ಟಿ ದೋಷ ಹೊಂದಿದವರಿಗೆ ಮತ್ತು ಪ್ರಯಾಣಿಕರಿಗೆ ಅನುಕೂಲವಿತ್ತು. ಆದರೆ, ಸಾರಿಗೆ ಇಲಾಖೆಯ ಬಸ್ ಗಳಲ್ಲಿ ಈಗ ಇಂತಹ ಸೌಲಭ್ಯ ಇಲ್ಲ. ನೆರೆ ರಾಜ್ಯಗಳ ಸಾರಿಗೆ ಬಸ್ ಗಳಲ್ಲಿ ಈ ಸೌಲಭ್ಯ ಇದೆ. ಸೌಲಭ್ಯ ಮರು ಜಾರಿ ಕೋರಿ ಶ್ರೇಯಸ್ ಎಂಬುವರು ಪಿಐಎಲ್ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರ ಜನರಿಗೆ ಅನುಕೂಲವಾಗುವ ನಿರ್ಧಾರ ಕೈಗೊಳ್ಳಬೇಕು. ಇತರೆ ರಾಜ್ಯಗಳಿಗೆ ಮಾದರಿಯಾಗುವಂತಹ ಯೋಜನೆ ರೂಪಿಸಬೇಕು. ನವೆಂಬರ್ 9ರೊಳಗೆ ಸಕಾರಾತ್ಮಕ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ಹೈಕೋರ್ಟ್ ಸಿಜೆ ಪ್ರಸನ್ನ ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಈ ಕುರಿತಾಗಿ ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular