HomeKarnatakaBIG NEWS : ರಾಜ್ಯ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ 'PIL' ಸಲ್ಲಿಕೆ...

BIG NEWS : ರಾಜ್ಯ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ‘PIL’ ಸಲ್ಲಿಕೆ |Bus Strike

ಬೆಂಗಳೂರು: ವಿವಿಧ ಪ್ರಮುಖ ಬೇಡಿಕೆಗಳ ಈಡೇರಿಕೆ ಹಾಗೂ ಬಾಕಿ ಇರುವ ವೇತನ ಪರಿಷ್ಕರಣೆಗೆ ಆಗ್ರಹಿಸಿ ಮೇ 20 ರಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಮುಷ್ಕರವನ್ನು ಪ್ರಶ್ನಿಸಿ ಮತ್ತು ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಲು ಆಗ್ರಹಿಸಿ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ (ಹೈಕೋರ್ಟ್) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ. ಸುದ್ದಗುಂಟೆ ಪಾಳ್ಯದ ನಿವಾಸಿ ವೇದಾವತಿ ಹಾಗೂ ಲಕ್ಕಸಂದ್ರದ ಶ್ರೀಧರ್ ಎಂಬುವರು ಈ ಜಂಟಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ನಿಯಮಗಳ ಪ್ರಕಾರ ಮುಷ್ಕರ ಹೂಡುವ ಮುನ್ನ 14 ದಿನಗಳ ಮುಂಚಿತವಾಗಿ ನೋಟಿಸ್ ನೀಡಬೇಕಿರುತ್ತದೆ. ಆದರೆ, ಸಾರಿಗೆ ನೌಕರರ ಸಂಘಟನೆಗಳು ಕೇವಲ 7 ದಿನಗಳ ಮುಂಚಿತವಾಗಿ ನೋಟಿಸ್ ನೀಡಿ ಮುಷ್ಕರಕ್ಕೆ ಮುಂದಾಗಿವೆ. ಇದು ಕಾನೂನು ಬಾಹಿರ ಮತ್ತು ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.ರಾಜ್ಯದಲ್ಲಿ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (KESMA) ಅಡಿಯಲ್ಲಿ ಜನವರಿ 1 ರಿಂದ ಜೂನ್ 30 ರವರೆಗೆ ಸಾರಿಗೆ ಸಂಸ್ಥೆಗಳ ಮುಷ್ಕರವನ್ನು ಈಗಾಗಲೇ ನಿರ್ಬಂಧಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮುಷ್ಕರಕ್ಕೆ ಕರೆ ನೀಡುವುದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಕಾರ್ಮಿಕ ಆಯುಕ್ತರ ನೇತೃತ್ವದಲ್ಲಿ ರಾಜಿ ಸಂಧಾನ ಪ್ರಕ್ರಿಯೆಯ ಮುಂದಿನ ವಿಚಾರಣೆಯು ಮೇ 25 ಕ್ಕೆ ನಿಗದಿಯಾಗಿದ್ದು, ಪ್ರಕ್ರಿಯೆ ಪ್ರಗತಿಯಲ್ಲಿರುವಾಗಲೇ ಮುಷ್ಕರ ನಡೆಸುವುದು ಸರಿಯಲ್ಲ ಎಂದು ಅರ್ಜಿದಾರರು ವಾದಿಸಿದ್ದಾರೆ.

ವಿದ್ಯಾರ್ಥಿಗಳಿಗೆ ತೊಂದರೆ: ಪ್ರಸ್ತುತ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ (SSLC) ಪೂರಕ ಪರೀಕ್ಷೆಗಳು ನಡೆಯುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಈ ಪರೀಕ್ಷೆಯ ಮೇಲೆ ನಿಂತಿದೆ. ಇದೇ ಅವಧಿಯಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ತಲುಪಲು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

    ಕೆಸ್ಮಾ ಕಾಯ್ದೆಯ ಉಲ್ಲಂಘನೆ, ಅಪೂರ್ಣ ನೋಟಿಸ್ ಅವಧಿ ಮತ್ತು ವಿದ್ಯಾರ್ಥಿಗಳ ಪರೀಕ್ಷೆಯ ಸಮಯವನ್ನು ಗಮನದಲ್ಲಿಟ್ಟುಕೊಂಡು ಹೈಕೋರ್ಟ್ ಈ ಕೂಡಲೇ ಮಧ್ಯಪ್ರವೇಶಿಸಿ ಮುಷ್ಕರಕ್ಕೆ ತಡೆಯಾಜ್ಞೆ ನೀಡುವ ಮೂಲಕ ಸಾರ್ವಜನಿಕ ಹಿತವನ್ನು ಕಾಯಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

    For Latest News Updates, Join Our Whatsapp Community🚩
    ranjith
    ranjith
    Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
    RELATED ARTICLES

    LEAVE A REPLY

    Please enter your comment!
    Please enter your name here

    Most Popular