HomeLatest NewsBREAKING: ಮಲಯಾಳಂ ಕಡ್ಡಾಯ ಮಸೂದೆಗೆ ವಿರೋಧ: ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್...

BREAKING: ಮಲಯಾಳಂ ಕಡ್ಡಾಯ ಮಸೂದೆಗೆ ವಿರೋಧ: ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ ಮಸೂದೆ ಮಂಡಿಸಿರುವ ಕೇರಳ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಮಸೂದೆ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದರು. ಸಿಎಂ ಸಿದ್ದರಾಮಯ್ಯ ಅವರ ಪತ್ರಕ್ಕೆ ಇದೀಗ ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ.

ಮಲಯಾಳಂ ಕಡ್ಡಾಯ ಮಸೂದೆಯಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಕನ್ನಡ, ತಮಿಳು ಮಾತನಾಡುವ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಮಸೂದೆಯ ಸೆಕ್ಷನ್ 7ರಲ್ಲಿ ರಕ್ಷಣಾತ್ಮಕ ನಿಯಮ ಅಳವಡಿಸಲಾಗಿದೆ. ಕನ್ನಡ, ತಮಿಳಿಗರು ತಮ್ಮ ಮಾತೃ ಭಾಷೆಯಲ್ಲಿಯೇ ವ್ಯವಹರಿಸಬಹುದು. ಸಚಿವಾಲಯ, ಇಲಾಖೆಯ ಮುಖ್ಯಸ್ಥರ ಜೊತೆಗೆ ಪತ್ರ ವ್ಯವಹಾರ ನಡೆಸಬಹುದು. ಕಚೇರಿಗಳಲ್ಲಿಯೂ ತಮ್ಮ ಮಾತೃ ಭಾಷೆಯಲ್ಲಿಯೇ ವ್ಯವಹರಿಸಬಹುದು. ಭಾಷಾ ಅಲ್ಪಸಂಖ್ಯಾತರು ನೀಡುವ ಪತ್ರಗಳಿಗೆ ಅದೇ ಭಾಷೆಯಲ್ಲಿಯೇ ಉತ್ತರ ನೀಡಲಾಗುವುದು. ಸರ್ಕಾರಿ ಕಚೇರಿಗಳಿಂದಲೂ ತಮ್ಮ ಭಾಷೆಯಲ್ಲಿಯೇ ಉತ್ತರ ಸಿಗುತ್ತದೆ ಎಂದು ಸಿಎಂ ಪಿಣರಾಯಿ ವಿಜಯನ್ ಸ್ಪಷ್ಟ ಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular