‘ಜವಾನ್’ ಚಿತ್ರಕ್ಕೆ ಪೈರಸಿ ಕಾಟ : ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ‘ಶಾರುಖ್ ಖಾನ್’

ಶಾರುಖ್ ಖಾನ್ ಅವರ ಜವಾನ್ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದ್ದು, ಶಾರುಖ್ ಖಾನ್ ಅಭಿನಯದ ಜವಾನ್ ಬಾಕ್ಸ್ ಆಫೀಸ್ ಧೂಳೆಬ್ಬಿಸುತ್ತಿದೆ. ಈ ಚಿತ್ರವು ಕೆಲವೇ ದಿನಗಳಲ್ಲಿ ದಾಖಲೆಯ ಗಳಿಕೆಯನ್ನು ಗಳಿಸಿದೆ. ಇದರ ನಡುವೆ ಚಿತ್ರಕ್ಕೆ ಪೈರಸಿ ಕಾಟ ಎದುರಾಗಿದ್ದು, ನಟ ಶಾರುಖ್ ಖಾನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಜವಾನ್ ಚಿತ್ರದ ಥಿಯೇಟರ್ ಪ್ರಿಂಟ್ ಲಿಂಕ್ ಅನ್ನು ಹಂಚಿಕೊಳ್ಳುವವರ ವಿರುದ್ಧ ನಟ ಶಾರುಖ್ ಖಾನ್ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಹೌದು. ನಟ ಶಾರುಖ್ ಖಾನ್ ಅವರೇ ಈ ಸಿನಿಮಾ ನಿರ್ಮಾಣ ಮಾಡಿದ್ದು, ಅವರ ಪತ್ನಿ ಗೌರಿ ಖಾನ್ ಚಿತ್ರದ ನಿರ್ಮಾಪಕರಾಗಿದ್ದಾರೆ. ಈ ಹಿನ್ನೆಲೆ ಪೈರಸಿ ವಿರುದ್ಧ ರೊಚ್ಚಿಗೆದ್ದ ನಟ ಶಾರುಖ್ ಖಾನ್ ಮುಂಬೈನ ಸಾಂತಾಕ್ರೂಜ್ ವೆಸ್ಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಿನಿಮಾಗೆ ನೂರಾರು ಜನರ ಕಠಿಣ ಪರಿಶ್ರಮವಿದೆ. ಚಿತ್ರದ ಪೈರಸಿಯಿಂದ ಪ್ರತಿಯನ್ನು ಹಾಳುಮಾಡುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಜವಾನ್ ಪ್ರೊಡಕ್ಷನ್ ಹೌಸ್ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ.ಸೆಪ್ಟೆಂಬರ್ 7 ರಂದು ಬಿಡುಗಡೆಯಾದ ಈ ಚಿತ್ರದಲ್ಲಿ ನಯನತಾರಾ ಮತ್ತು ವಿಜಯ್ ಸೇತುಪತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ಮತ್ತು ಸಂಜಯ್ ದತ್ ಅವರು ಕೂಡ ವಿಶೇಷ ಪಾತ್ರಧಾರಿಗಳಾಗಿ ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ಸನ್ಯಾ ಮಲ್ಹೋತ್ರಾ, ಪ್ರಿಯಾಮಣಿ, ಗಿರಿಜಾ ಓಕ್, ಸಂಜೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ಡೋಗ್ರಾ ಮತ್ತು ಸುನಿಲ್ ಗ್ರೋವರ್ ಕೂಡ ನಟಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read