ಕಲಬುರಗಿ: ಕನ್ನಡ ಚಿತ್ರರಂಗಕ್ಕೆ ಪೈರಸಿ ಕಾಟ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ, ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಪೈರಸಿ ಬಗ್ಗೆ ಆಂಟಿ ಪೈರಸಿ ಕಾನೂನು ಇದೆ. ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಸಿನಿಮಾ ಅಷ್ಟೆ ಅಲ್ಲಾ, ಎಲ್ಲಾ ರಂಗದಲ್ಲೂ ಕೂಡ ಪೈರಸಿ ಇದೆ. ಹಾಗಾಗಿ ಇದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.
ಈಗ ಅಮೃತಾಂಜನ್, ವಿಕ್ಸ್ ನಿಂದ ಹಿಡಿದು ಎಲ್ಲವೂ ಡೂಪ್ಲಿಕೆಟ್ ಆಗುತ್ತಿವೆ. ಹಾಗೇ ಸಿನೇಮಾ ರಂಗದಲ್ಲಿ ಕೂಡ ಪೈರೆಸಿ ತಡೆಗಟ್ಟಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.ಇದೇ ವೇಳೆ ನಟ ಕಿಚ್ಚ ಸುದೀಪ್ ಹಾಗೂ ದರ್ಶನ್ ನಡುವೆ ಸ್ಟಾರ್ ವಾರ್ ವಿಚಾರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ ಬೊಮ್ಮಾಯಿ, ಅವರ ವಿಚಾರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದಿದ್ದಾರೆ.

