ಬೆಂಗಳೂರು : 178 ಕನ್ನಡಿಗರನ್ನು ಹೊತ್ತ ವಿಮಾನ ಜಮ್ಮು- ಕಾಶ್ಮೀರದಿಂದ ಇಂದು ಬೆಂಗಳೂರಿಗೆ ಆಗಮಿಸಿದೆ. 178 ಕನ್ನಡಿಗರನ್ನು ಹೊತ್ತ ವಿಶೇಷ ವಿಮಾನ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿಳಿದಿದೆ.
ಕಾಶ್ಮೀರದ ವಿವಿಧ ಭಾಗಗಳಲ್ಲಿರುವ ಕರ್ನಾಟಕದ ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತರಲು ಸಚಿವ ಸಂತೋಷ್ ಲಾಡ್ ನಿನ್ನೆ ಕಾಶ್ಮೀರಕ್ಕೆ ಆಗಮಿಸಿದ್ದರು.
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಪ್ರವಾಸಿಗರ ಪಾರ್ಥಿವ ಶರೀರ ಈಗಾಗಲೇ ಅವರ ಸ್ವಗೃಹಕ್ಕೆ ಆಗಮಿಸಿದೆ. ಕಾಶ್ಮೀರದ ವಿವಿಧೆಡೆ ಸಿಲುಕಿರುವ ರಾಜ್ಯದ ಪ್ರವಾಸಿಗರು ಸಹ ಸುರಕ್ಷಿತವಾಗಿ ಇಂದು ಬಂದಿದ್ದಾರೆ.
You Might Also Like
TAGGED:ಜಮ್ಮು- ಕಾಶ್ಮೀರ