HomeLatest NewsSHOCKING : ಚಪ್ಪಟೆ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ ; ಆಪರೇಷನ್‌'ಗೂ ಮುನ್ನವೇ ದಾವಣಗೆರೆಯಲ್ಲಿ ಯುವಕ ಸಾವು.!

SHOCKING : ಚಪ್ಪಟೆ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ ; ಆಪರೇಷನ್‌’ಗೂ ಮುನ್ನವೇ ದಾವಣಗೆರೆಯಲ್ಲಿ ಯುವಕ ಸಾವು.!

ದಾವಣಗೆರೆ: ಮೂಗಿನ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಲು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮೃತಪಟ್ಟಿರುವ ಘಟನೆ ದಾವಣಗೆರೆಯ ನವೋದಯ ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆ ಆಸ್ಪತ್ರೆಯ ನಿರ್ಲಕ್ಷ್ಯದ ಆರೋಪಕ್ಕೆ ಕಾರಣವಾಗಿದ್ದು, ಯುವಕನ ಸಾವಿನ ಬಗ್ಗೆ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

ಮೃತ ಯುವಕನನ್ನು ದಾವಣಗೆರೆ ನಗರದ ಕೆಬಿ ಬಡಾವಣೆಯ ನಿವಾಸಿ ಸೃಜನ್ ಎಂದು ಗುರುತಿಸಲಾಗಿದೆ. ಮೃತ ಯುವಕನಿಗೆ ಮೂಗು ಚಪ್ಪಟೆಯಾಗಿರುವುದರಿಂದ ಉಸಿರಾಟದ ತೊಂದರೆ ಉಂಟಾಗುತ್ತಿತ್ತು ಎಂದು ಕುಟುಂಬದವರಿಗೆ ತಿಳಿಸಿದ್ದ ಎನ್ನಲಾಗಿದೆ. ಇದಕ್ಕಾಗಿ ವೈದ್ಯರ ಸಲಹೆ ಮೇರೆಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದನು.

ಆದರೆ ಶಸ್ತ್ರಚಿಕಿತ್ಸೆ ಆರಂಭಿಸುವ ಮುನ್ನವೇ ಯುವಕ ಮೃತಪಟ್ಟಿದ್ದಾನೆ. ಆಸ್ಪತ್ರೆಯವರು ನೀಡಿದ ಔಷಧ ಅಥವಾ ಅನಸ್ತೀಷಿಯಾದ ಓವರ್‌ಡೋಸ್‌ನಿಂದಲೇ ಮಗ ಮೃತಪಟ್ಟಿದ್ದಾನೆ ಎಂದು ಪೋಷಕರು ಆರೋಪಿಸಿ, ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತ ಆಸ್ಪತ್ರೆ ಆಡಳಿತವು ಆರೋಪಗಳನ್ನು ತಳ್ಳಿಹಾಕಿದೆ. ಯಾವುದೇ ಶಸ್ತ್ರಚಿಕಿತ್ಸೆ ನಡೆಸಿಲ್ಲ. ಅಲ್ಲದೆ, ಓವರ್‌ಡೋಸ್ ನೀಡಿರುವ ಪ್ರಶ್ನೆಯೇ ಇಲ್ಲ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಯುವಕನ ಸಾವಿನ ನಿಖರ ಕಾರಣ ವೈದ್ಯಕೀಯ ವರದಿ ಹಾಗೂ ತನಿಖೆಯ ಬಳಿಕವೇ ತಿಳಿಯಬೇಕಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular