ಬೆಂಗಳೂರು : ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಟ್ವೀಟ್ ಮಾಡುವ ಮೂಲಕ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ವಿಡಿಯೋ ಸಮೇತ ಟ್ವೀಟ್ ಹಂಚಿಕೊಂಡ ಅವರು ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಅಥವಾ ಬಿಎಂಆರ್ ಸಿ ಎಲ್ MD ಯಾರಾದ್ರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ವಿಡಿಯೋ ಸಮೇತ ಟ್ವೀಟ್ ಹಂಚಿಕೊಂಡಿದ್ದಾರೆ.
ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. @bbmpcommr ಅಥವಾ @BMRCL MD ಯಾರಾದ್ರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ. pic.twitter.com/qRDqy5NEzZ
— Krishna Byre Gowda (@krishnabgowda) August 14, 2024

