HomeKarnatakaBREAKING: ಫ್ಲೈವುಡ್ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ: ಯಂತ್ರೋಪಕರಣ, ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮ

BREAKING: ಫ್ಲೈವುಡ್ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ: ಯಂತ್ರೋಪಕರಣ, ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮ

ರಾಮನಗರ: ಫ್ಲೈವುಡ್ ಗೋದಾಮಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಗೋಡೌನ್‌ನಲ್ಲಿದ್ದ ವಸ್ತುಗಳು, ಪೀಠೋಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಈ ಗೋಡೌನ್ ಶೋಯೆಬ್ ಎಂಬುವವರಿಗೆ ಸೇರಿದ್ದಾಗಿದೆ. ಕಳೆದ ಹಲವು ವರ್ಷಗಳಿಂದ ಈ ಗೋಡೌನ್‌ಗೆ ಬೀಗ ಹಾಕಲಾಗಿತ್ತು. ಇಂದು ಬೆಳಿಗ್ಗೆ ಗೋಡೌನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಗೋಡೌನ್‌ನಲ್ಲಿದ್ದ ಹಳೆಯ ಯಂತ್ರೋಪಕರಣಗಳು, ಫ್ಲೈವುಡ್ ಶೀಟ್‌ಗಳು, ಪೀಠೋಪಕರಣ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular