BIG BREAKING: ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಗೃಹಿಣಿಯರಿಗೆ ಮೋದಿ ಗುಡ್ ನ್ಯೂಸ್: LPG ಸಿಲಿಂಡರ್ ದರ 100 ರೂ. ಇಳಿಕೆ ಘೋಷಣೆ

ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100 ರೂಪಾಯಿ ಕಡಿತವನ್ನು ಘೋಷಿಸಿದರು.

ಎಕ್ಸ್ ಪೋಸ್ಟ್‌ ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು, “ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿಗಳಷ್ಟು ಕಡಿಮೆ ಮಾಡಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

“ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವ ದರದಲ್ಲಿ ಕಲ್ಪಿಸುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸುವ ಗುರಿಯನ್ನು ಹೊಂದಿದ್ದೇವೆ. ಆರೋಗ್ಯಕರ ವಾತಾವರಣವನ್ನು ಖಾತ್ರಿಪಡಿಸಿಕೊಳ್ಳುತ್ತೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸಲು ಮತ್ತು ಅವರಿಗೆ ‘ಜೀವನ ಸುಲಭ’ವನ್ನು ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ಅವರು X ನಲ್ಲಿ ಹೇಳಿದ್ದಾರೆ.

https://twitter.com/narendramodi/status/1765938424723202381

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read