HomeLatest Newsಹೈದರಾಬಾದ್ ಭೀಕರ ಅಗ್ನಿ ದುರಂತದಲ್ಲಿ 17 ಜನ ಸಾವು: ಪ್ರಧಾನಿ ಮೋದಿ ಸಂತಾಪ, ತಲಾ 2...

ಹೈದರಾಬಾದ್ ಭೀಕರ ಅಗ್ನಿ ದುರಂತದಲ್ಲಿ 17 ಜನ ಸಾವು: ಪ್ರಧಾನಿ ಮೋದಿ ಸಂತಾಪ, ತಲಾ 2 ಲಕ್ಷ ಪರಿಹಾರ ಘೋಷಣೆ

ನವದೆಹಲಿ: ತೆಲಂಗಾಣದ ಹೈದರಾಬಾದ್‌ನ ಐಕಾನಿಕ್ ಚಾರ್ಮಿನಾರ್ ಬಳಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಮಕ್ಕಳು ಸೇರಿದಂತೆ 17 ಜನ ಸಾವನ್ನಪ್ಪಿದ್ದಾರೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರ ಪ್ರತಿ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.

“ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ.

ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು” ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular