ಪಿಎಂ ಫಸಲ್ ಬೀಮಾ ಯೋಜನೆ : ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ

ಬಳ್ಳಾರಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆ ಮಾಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯಡಿ ತಿಳಿಸಿರುವ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ) ಹಾಗೂ ಹೋಬಳಿ ಮಟ್ಟದ ಬೆಳೆಗಳಾದ ಜೋಳ (ನೀರಾವರಿ/ಮಳೆಯಾಶ್ರಿತ), ರಾಗಿ (ಮಳೆಯಾಶ್ರಿತ), ಸಜ್ಜೆ (ನೀರಾವರಿ/ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ), ತೊಗರಿ (ನೀರಾವರಿ/ಮಳೆಯಾಶ್ರಿತ), ಉರುಳಿ (ಮಳೆಯಾಶ್ರಿತ), ಸೂರ್ಯಕಾಂತಿ (ನೀರಾವರಿ/ಮಳೆಯಾಶ್ರಿತ), ಎಳ್ಳು (ಮಳೆಯಾಶ್ರಿತ), ಹತ್ತಿ (ನೀರಾವರಿ/ಮಳೆಯಾಶ್ರಿತ), ನೆಲಗಡಲೆ (ನೀರಾವರಿ/ಮಳೆಯಾಶ್ರಿತ), ಈರುಳ್ಳಿ (ನೀರಾವರಿ), ಕೆಂಪು ಮೆಣಸಿನಕಾಯಿ (ನೀರಾವರಿ) ಬಳ್ಳಾರಿ ಜಿಲ್ಲೆಯ ಬೆಳೆಗಳಾಗಿದ್ದು, ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆ ಮಾಡಿಸಬೇಕು.

ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ: ನೀರಾವರಿ/ಮಳೆಯಾಶ್ರಿತ ಮುಸುಕಿನ ಜೋಳ, ಸೂರ್ಯಕಾಂತಿ, ಹತ್ತಿ, ಕೆಂಪು ಮೆಣಸಿನಕಾಯಿ, ಜೋಳ, ಹಾಗೂ  ನೀರಾವರಿ ತೊಗರಿ, ಈರುಳ್ಳಿ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಜು. 31 ಕೊನೆಯ ದಿನವಾಗಿರುತ್ತದೆ.  ನೀರಾವರಿ ಭತ್ತ, ಮಳೆಯಾಶ್ರಿತ ರಾಗಿ ಹಾಗೂ ನೀರಾವರಿ/ಮಳೆಯಾಶ್ರಿತ ತೊಗರಿ, ನವಣೆ, ನೆಲಗಡಲೆ, ಸಜ್ಜೆ ಬೆಳೆಗಳಿಗೆ ವಿಮೆ ಮಾಡಿಸಲು ಆಗಸ್ಟ್ 16 ಕೊನೆಯ ದಿನವಾಗಿದೆ.

ನಿಗದಿಪಡಿಸಿದ ಅವಧಿಯೊಳಗೆ ರೈತರು ಬ್ಯಾಂಕುಗಳಲ್ಲಿ ಬೆಳೆ ವಿಮೆ ಮಾಡಿಸಿಕೊಳ್ಳಲು ತಿಳಿಸಿದ್ದು, ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್‍ಗಳು/ಸಾರ್ವಜನಿಕ ಸೇವಾ ಕೇಂದ್ರಗಳನ್ನು (ಅommoಟಿ Seಡಿviಛಿe ಅeಟಿಣeಡಿs) ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.

ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೊಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read