ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 19 ನೇ ಕಂತು ಫೆಬ್ರವರಿ 24ರಂದು ಬಿಡುಗಡೆಯಾಗಲಿದ್ದು, ಅದನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 24ರಂದು ಬಿಹಾರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ 19 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ನೇರ ಲಾಭ ವರ್ಗಾವಣೆ ವ್ಯವಸ್ಥೆಯಡಿಯಲ್ಲಿ ಈ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಯೋಜನೆಯಡಿ ವರ್ಷಕ್ಕೆ 6000 ರೂ.ಗಳನ್ನು ತಲಾ 2000 ರೂ.ಗಳ ಮೂರು ಸಮಾನ ಕಂತುಗಳಲ್ಲಿ ನೀಡಲಿದ್ದು, ಇಲ್ಲಿಯವರೆಗೆ 18 ಕಂತುಗಳನ್ನು ವಿತರಿಸಲಾಗಿದೆ. ಇದೀಗ 19ನೇ ಕಂತು ಪಾವತಿಗೆ ದಿನಾಂಕ ನಿಗದಿಯಾಗಿದೆ.