HomeAgricultureಪಿಎಂ ಕಿಸಾನ್ ಯೋಜನೆ ಫಲಾನುಭವಿ ರೈತರ ಗಮನಕ್ಕೆ: ಮುಂದಿನ ಕಂತಿನ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ

ಪಿಎಂ ಕಿಸಾನ್ ಯೋಜನೆ ಫಲಾನುಭವಿ ರೈತರ ಗಮನಕ್ಕೆ: ಮುಂದಿನ ಕಂತಿನ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ

ಪಿ.ಎಂ. ಕಿಸಾನ್ ಯೋಜನೆಯ ಅರ್ಹ ಫಲಾನುಭವಿ ರೈತರು ಮುಂದಿನ ಕಂತಿನ ನೆರವು ಪಡೆಯಲು ಬಯೋಮೆಟ್ರಿಕ್ ಅಥವಾ ಮುಖ ದೃಢೀಕರಣ ಆಧಾರಿತ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

 ಪಿ.ಎಂ. ಕಿಸಾನ್ ಯೋಜನೆಯಲ್ಲಿ ನಕಲಿ ಫಲಾನುಭವಿಗಳನ್ನು ತಡೆಯಲು, ಮೃತರನ್ನು ಪಟ್ಟಿಯಿಂದ ಕೈಬಿಟ್ಟು, ಅರ್ಹ ರೈತರಿಗೆ ಪಾರದರ್ಶಕವಾಗಿ ಹಣ ಜಮೆ ಮಾಡಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಪ್ರತಿಯೊಬ್ಬ ರೈತರಿಗೆ ಆರ್ಥಿಕ ನೆರವಿನ ಭಾಗವಾಗಿ ವಾರ್ಷಿಕ ರೂ. 6,000 ಹಣವನ್ನು ಮೂರು ಕಂತುಗಳಲ್ಲಿ (ಪ್ರತಿ 4 ತಿಂಗಳಿಗೊಮ್ಮೆ ರೂ. 2,000 ರಂತೆ ನೇರ ನಗದು ವರ್ಗಾವಣೆ  ಮೂಲಕ ಬ್ಯಾಂಕ್  ಖಾತೆಗೆ ಜಮೆ ಮಾಡಲಾಗಿದೆ.

ಆಧಾರ್ ಒಟಿಪಿ ಆಧಾರಿತ ಇ-ಕೆವೈಸಿಯಿಂದಾಗಿ ಮೃತಪಟ್ಟವರ ಖಾತೆಗಳಿಗೂ ಹಣ ವರ್ಗಾವಣೆಯಾಗುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದಿದ್ದರಿಂದ, ಕೇಂದ್ರ ಸರ್ಕಾರವು ಒಟಿಪಿ ವ್ಯವಸ್ಥೆಯನ್ನು ರದ್ದುಗೊಳಿಸಿದ್ದು, ಕೇವಲ ಬಯೋಮೆಟ್ರಿಕ್ ಅಥವಾ ಫೇಸ್ ಆಧಾರಿತ ಇ- ಕೆವೈಸಿಗೆ ಮಾತ್ರ ಅವಕಾಶ ನೀಡಿದೆ. ಪ್ರತಿಯೊಬ್ಬ ಫಲಾನುಭವಿಯೂ ಬ್ಯಾಂಕ್ ಖಾತೆಗೆ ಆಧಾರ್ ಹಾಗೂ ಲಿಂಕ್ ಮಾಡಿಸಿದ್ದರೂ ಸಹ ಈ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ಜಿಲ್ಲೆಯ ಒಟ್ಟು 130653 ರೈತರ ಇ-ಕೆವೈಸಿ ಬಾಕಿ ಇದೆ. ತಾಲ್ಲೂಕುವಾರು ಚನ್ನಗಿರಿ  36390, ದಾವಣಗೆರೆ 29778, ಹರಿಹರ – 16681, ಹೊನ್ನಾಳಿ – 17052, ಜಗಳೂರು – 19630 ಮತ್ತು  ನ್ಯಾಮತಿ – 2533 ರೈತರ ಇ-ಕೆ.ವೈಸಿ ಮಾಡಿಸಬೇಕಾಗಿರುತ್ತದೆ.

ಇ-ಕೆವೈಸಿ ಪೂರ್ಣಗೊಳಿಸಲು ವಿಧಾನಗಳು:

ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ: ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ  ಕೇಂದ್ರಗಳಲ್ಲಿ ಬಯೋಮೆಟ್ರಿಕ್ ನೀಡುವುದರ ಮೂಲಕ ಇ-ಕೆವೈಸಿ ಮಾಡಿಸಬಹುದು.

ಮುಖ(ಫೇಸ್) ದೃಢೀಕರಣ ಆಧಾರಿತ ಇ-ಕೆವೈಸಿ: & ಪಿ.ಎಂ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಡೌನ್‍ಲೋಡ್ ಮಾಡಿಕೊಂಡು, ಸ್ಮಾರ್ಟ್‍ಫೆÇೀನ್ ಮೂಲಕ ಮುಖ ದೃಢೀಕರಣ ಮಾಡಿ ಸ್ವತಃ ಇ-ಕೆವೈಸಿ ಪೂರ್ಣಗೊಳಿಸಬಹುದು. ಇದು ಬೆರಳಚ್ಚು ನೀಡಲು ಸಾಧ್ಯವಾಗದ ಹಿರಿಯರಿಗೆ ಹಾಗೂ ಇತರರಿಗೆ ನೆರವಾಗಲಿದೆ. ಜಿಲ್ಲೆಯ ಎಲ್ಲಾ ಫಲಾನುಭವಿ ರೈತರು ತಕ್ಷಣವೇ ಇ-ಕೆವೈಸಿ ಪೂರ್ಣಗೊಳಿಸಿ ಯೋಜನೆಯ ಸೌಲಭ್ಯವನ್ನು ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular