HomeLatest Newsರೈತರೇ ಗಮನಿಸಿ : 'PM KISAN' ಪ್ರೋತ್ಸಾಹಧನ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ

ರೈತರೇ ಗಮನಿಸಿ : ‘PM KISAN’ ಪ್ರೋತ್ಸಾಹಧನ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ

ರೈತರು ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ರೈತರು ತಮ್ಮ ಫ್ರೂಟ್ಸ್ ಐಡಿ ಗೆ ಇ-ಕೆವೈಸಿ, ಮೊಬೈಲ್ ಸಂಖ್ಯೆ, ತಮ್ಮ ಹೆಸರಿನಲ್ಲಿರುವ ಎಲ್ಲಾ ಭೂಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ ಎಫ್‌ಐಡಿಯಲ್ಲಿ ಸೇರ್ಪಡಿಸಿಕೊಳ್ಳುವ ಮೂಲಕ ಕೇಂದ್ರ ನೋಂದಾಯಿತ ರೈತರ ಸಂಖ್ಯೆ ಸೃಜನೆ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯ ಪ್ರಕಾರ ಫ್ರೂಟ್ಸ್ ಹಾಗೂ ಭೂಮಿ ದತ್ತಾಂಶಗಳನ್ನು ನಿಯತವಾಗಿ ಜೋಡಣೆ ಮಾಡುವುದು ಅತಿ ಮುಖ್ಯವಾಗಿದೆ. ಹಾಗಾಗಿ ರೈತರು ಫ್ರೂಟ್ಸ್ ತಂತ್ರಾAಶದಲ್ಲಿ ಇ-ಕೆವೈಸಿ, ಮೊಬೈಲ್ ನಂಬರ್‌ಗಳನ್ನು ಅಪ್ಡೇಟ್ ಮಾಡಿಕೊಳ್ಳುವುದು, ರೈತರ ಹೆಸರಿನಲ್ಲಿರುವ ಎಲ್ಲಾ ಭೂಹಿಡುವಳಿಗಳನ್ನು ಕಡ್ಡಾಯವಾಗಿ ತಮ್ಮ ಎಫ್.ಐ.ಡಿಯಲ್ಲಿ ಸೇರ್ಪಡಿಸಿಕೊಳ್ಳುವುದು ಮತ್ತು ರೈತರ ಸಹಮತಿ ಪತ್ರವನ್ನು ವಿದ್ಯುನ್ಮಾನ ರೀತಿಯಲ್ಲಿ ನೀಡುವುದು ಕಡ್ಡಾಯವಾಗಿದೆ.

ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದಿಂದ ಒಂದು ಕೇಂದ್ರ ನೋಂದಾಯಿತ ರೈತರ ಸಂಖ್ಯೆಯನ್ನು (ಸೆಂಟ್ರಲ್ ಫಾರ್ಮರ್ ಐಡಿ) ಸೃಜಿಸಲಾಗುತ್ತದೆ. ಈ ರೀತಿಯಾಗಿ ಸೃಜಿಸಲಾದ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳಿಸುವ ಪಿಎಂ-ಕಿಸಾನ್ ಯೋಜನೆ ಸೇರಿದಂತೆ ಇತರೆ ಯೋಜನೆಗಳಾದ ಬರ ಪರಿಹಾರ, ಬೆಳೆ ವಿಮೆ, ಮುಂತಾದ ಯೋಜನೆಗಳಿಗೆ ಕೇಂದ್ರ ನೊಂದಾಯಿತ ರೈತರ ಸಂಖ್ಯೆಯನ್ನು ಕಡ್ಡಾಯವಾಗಿ ಉಪಯೋಗಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಗಾಗಿ ರೈತರು ಕೇಂದ್ರ ಅಥವಾ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲಾಗುವ ಯೋಜನೆಯ ಸೌಲಭ್ಯವನ್ನು ಪಡೆಯಲು ರೈತರು ತಮ್ಮ ಆಧಾರ್ ಕಾರ್ಡ, ಆಧಾರ್ ಕಾರ್ಡ್ನೊಂದಿಗೆ ಜೋಡಣೆಯಾಗಿರುವ ಮೊಬೈಲ್, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಹಾಗೂ ರೈತರ ಹೆಸರಿನಲ್ಲಿರುವ ಎಲ್ಲಾ ಪಹಣಿಗಳನ್ನು ತೆಗೆದುಕೊಂಡು ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ ಹಾಗೂ ತೋಟಗಾರಿಕೆ ಇಲಾಖಾ ಕಚೇರಿಗಳಿಗೆ ಭೇಟಿ ನೀಡಿ ಕೇಂದ್ರ ನೋಂದಾಯಿತ ರೈತರ ಸಂಖ್ಯೆ ಸೃಜಿಸಿಕೊಳ್ಳಬೇಕು. ತಪ್ಪಿದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಅಥವಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular