HomeKarnatakaರಾಜ್ಯದ 22 ಸಾವಿರಕ್ಕೂ ಅಧಿಕ ರೈತರಿಗೆ ಪಿಎಂ ಕಿಸಾನ್ ಕಂತು ಬಿಡುಗಡೆ

ರಾಜ್ಯದ 22 ಸಾವಿರಕ್ಕೂ ಅಧಿಕ ರೈತರಿಗೆ ಪಿಎಂ ಕಿಸಾನ್ ಕಂತು ಬಿಡುಗಡೆ

ಬೆಂಗಳೂರು: ರಾಜ್ಯದ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಅವರಿಗೆ ರಾಜ್ಯದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ.

ರಾಜ್ಯದ ಸುಮಾರು ಮೂವತ್ತು ಸಾವಿರಕ್ಕೂ ಅಧಿಕ ಅರ್ಹ ರೈತರಿಗೆ ಸಿಎಂ ಕಿಸಾನ್ ಯೋಜನೆ ಲಾಭದಿಂದ ವಂಚಿತರಾಗಿದ್ದಾರೆ ಎಂದು ಚಲುವರಾಯಸ್ವಾಮಿ ಕೇಂದ್ರ ಸಚಿವರ ಗಮನಕ್ಕೆ ತಂದಿದ್ದರು. ಈ ಕುರಿತಾಗಿ ಕಳೆದ ಡಿಸೆಂಬರ್ 17ರಂದು ಪತ್ರ ಬರೆದಿದ್ದರು. ಕಳೆದ ವಾರ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಕೃಷಿ ಸಚಿವರಿಗೆ ಈ ಕುರಿತಾಗಿ ಮನವಿ ಮಾಡಿದ್ದರು.

ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ರಾಜ್ಯ ಸರ್ಕಾರ ನೀಡಿದ ದೃಢೀಕರಣದ ಆಧಾರದ ಮೇಲೆ 22 ಸಾವಿರಕ್ಕೂ ಹೆಚ್ಚು ಫಲಾನುಭವಿ ರೈತರನ್ನು 23ನೇ ಕಂತಿನ ಪಾವತಿ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಶೀಘ್ರವೇ ಹಣ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಉಳಿದ ಪ್ರಕರಣಗಳನ್ನು ರಾಜ್ಯ ಸರ್ಕಾರದ ಅಧಿಕಾರಿಗಳು ಪರಿಶೀಲಿಸಿ ದೃಢೀಕರಣ ನೀಡಿದಲ್ಲಿ ಅವರನ್ನೂ ಯೋಜನೆಯಡಿ ಸೇರ್ಪಡೆ ಮಾಡಲಾಗುವುದು ಎಂದು ಪತ್ರ ಬರೆದು ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೆ ಸಚಿವ ಚಲುವರಾಯಸ್ವಾಮಿ ಕೃತಜ್ಞತೆ ಸಲ್ಲಿಸಿದ್ದು, ರಾಜ್ಯದ ರೈತರ ಹಿತದೃಷ್ಟಿಯಿಂದ ತಾವು ಸಲ್ಲಿಸಿದ ಮನವಿ ಪುರಸ್ಕರಿಸಿದ ಕೇಂದ್ರ ಕೃಷಿ ಸಚಿವರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular