HomeKarnatakaಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳೇ ಗಮನಿಸಿ : `ಇ-ಕೆವೈಸಿ’ ಮಾಡಿಸಲು ಇಂದೇ ಕೊನೆಯ ದಿನ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳೇ ಗಮನಿಸಿ : `ಇ-ಕೆವೈಸಿ’ ಮಾಡಿಸಲು ಇಂದೇ ಕೊನೆಯ ದಿನ

ಬೆಂಗಳೂರು  : ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಕೃಷಿ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ ರೈತರಿಗೆ ಇ-ಕೆವೈಸಿ ಮಾಡಿಸಲು ಜುಲೈ 07ರ ಇಂದು ಕೊನೆಯ ದಿನವಾಗಿದೆ.

ಪಿ.ಎಂ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ನೋಂದಾಯಿತ ರೈತರು ಇ-ಕೆವೈಸಿ ಮಾಡುವುದು ಅತೀ ಅವಶ್ಯಕವಾಗಿದ್ದು, 14ನೇ ಕಂತಿನ ನೆರವಿನ ಹಣ ವರ್ಗಾವಣೆ ಇ-ಕೆವೈಸಿ ಮಾಡಿಸಿರುವ ಮತ್ತು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿರುವ ಫಲಾನುಭವಿಗಳಿಗೆ ಮಾತ್ರ ಬರುತ್ತದೆ. ಈ ಯೋಜನೆಯಡಿ ಇ-ಕೆವೈಸಿ ಮಾಡಿಸಲು ಇಂದು ಕೊನೆಯ ದಿನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರ ಮುಖ ದೃಢೀಕರಣ ಘೋಷಿಸಿದೊಂದಿಗೆ (ಫೇಸ್ ಅಥೆಂಟಿಕೇಷನ್ ಆಪ್ ಇ–ಕೆವೈಸಿ) ಪಿ.ಎಂ. ಕಿಸಾನ್ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದೆ. ರೈತರು ಈ ಅಪ್ಲಿಕೇಶನನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್ಲೋಡ್ ಮಾಡಿ ಇ-ಕೆವೈಸಿ ಮಾಡಿಕೊಳ್ಳಬಹುದು. ಇತರೆ ರೈತರು ಇ-ಕೆವೈಸಿ ಮಾಡಿಸಲು ಸಹಾಯ ಮಾಡಬಹುದು. ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಅಥವಾ ಸೇವಾ ಸಿಂಧು ಸೆಂಟರ್‌ಗಳಿಗೆ ಭೇಟಿ ನೀಡಿ ಅಗತ್ಯ ಸೇವೆ ಪಡೆಯಬಹುದು.

For Latest News Updates, Join Our Whatsapp Community🚩
RELATED ARTICLES

Most Popular