‘ಪಿಎಂ ಕಿಸಾನ್ ಸಮ್ಮಾನ್’ ಯೋಜನೆಯ 17 ನೇ ಕಂತಿನ ಹಣ ಯಾವಾಗ ಬರುತ್ತೆ ? ರೈತರಿಗೆ ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ದೇಶದ ರೈತರಿಗೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6,000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಈ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ವಾರ್ಷಿಕ ಮೂರು ಕಂತುಗಳಲ್ಲಿ ರೈತರ ಖಾತೆಗಳಿಗೆ ಹಾಕಲಾಗುತ್ತದೆ. ಪ್ರತಿ ಕಂತಿನಡಿ ಡಿಬಿಟಿ ಮೂಲಕ ರೈತರ ಖಾತೆಗೆ 2 ಸಾವಿರ ರೂಪಾಯಿನಂತೆ ಇದುವರೆಗೆ ಒಟ್ಟು 16 ಕಂತುಗಳನ್ನು ರೈತರ ಖಾತೆಗೆ ವರ್ಗಾಯಿಸಲಾಗಿದೆ. ಫೆಬ್ರವರಿ 28 ರಂದು ಮಹಾರಾಷ್ಟ್ರದಲ್ಲಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ , ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16 ನೇ ಕಂತನ್ನು ಬಿಡುಗಡೆ ಮಾಡಿದರು. 16ನೇ ಕಂತು ಬಿಡುಗಡೆಯಾಗಿ ಮೂರು ತಿಂಗಳು ಕಳೆದಿವೆ. ಇದೀಗ 17ನೇ ಕಂತಿಗೆ ರೈತರು ಕಾತರದಿಂದ ಕಾಯುತ್ತಿದ್ದಾರೆ.

ಭಾರತ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತನ್ನು ಯಾವಾಗ ಬಿಡುಗಡೆ ಮಾಡಬಹುದು ಎಂಬುದನ್ನು ನೀವು ತಿಳಿದುಕೊಳ್ಳಲು ಬಯಸುವಿರಾ? ಅದರ ಬಗ್ಗೆ ಇಲ್ಲಿದೆ ಮಾಹಿತಿ.

ಮಾಧ್ಯಮ ವರದಿಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ನಂತರ ಕೇಂದ್ರ ಸರ್ಕಾರವು ಜೂನ್ ಅಥವಾ ಜುಲೈನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತು ಬಿಡುಗಡೆ ಮಾಡಬಹುದು. ಆದರೆ ಕಂತಿನ ಹಣ ಯಾವಾಗ ವರ್ಗಾವಣೆಯಾಗುತ್ತದೆ ಎಂಬ ಬಗ್ಗೆ ಸರ್ಕಾರ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಅದೇ ಸಮಯದಲ್ಲಿ ಯೋಜನೆಯಡಿಯಲ್ಲಿ ಇನ್ನೂ ಇ-ಕೆವೈಸಿ ಮಾಡದ ರೈತರು ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ.

ಆದ್ದರಿಂದ ನೀವು 17 ನೇ ಕಂತಿನ ಪ್ರಯೋಜನವನ್ನು ಪಡೆಯಲು ಬಯಸಿದರೆ, ನಿಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ನೀವು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಬೇಕು. ಇದಲ್ಲದೇ ಯೋಜನೆಯಡಿ ಭೂದಾಖಲೆಗಳನ್ನು ಪರಿಶೀಲಿಸದೇ ಇರುವ ರೈತರು ಕೂಡ ಈ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು.

ಅದೇ ಸಮಯದಲ್ಲಿ, ಯೋಜನೆಗೆ ಅರ್ಜಿ ಸಲ್ಲಿಸುವಾಗ ಯಾವುದೇ ತಪ್ಪು ಮಾಹಿತಿಯನ್ನು ನಮೂದಿಸಿದ ರೈತರು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದಿಲ್ಲ. ಯೋಜನೆಯಡಿಯಲ್ಲಿ ಇ-ಕೆವೈಸಿ ಮತ್ತು ಭೂ ಪರಿಶೀಲನೆ ಪೂರ್ಣಗೊಂಡಿರುವ ರೈತರು 17ನೇ ಕಂತು ಬಿಡುಗಡೆಯಾದ ನಂತರ ಅವರ ಖಾತೆಗೆ ಹಣವನ್ನು ಪಡೆಯುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read