BREAKING NEWS: ಪ್ರಧಾನಿ ಮೋದಿ ಪ್ರಯಾಣಿಸುವ ವಿಮಾನದಲ್ಲಿ ತಾಂತ್ರಿಕ ದೋಷ

ರಾಂಚಿ: ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಕೆಲ ಕಾಲ ವಿಳಂಬವಾಗಿ ವಿಮಾನ ಹಾರಾಟ ನಡೆಸಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಪ್ರಧಾನಿ ಮೋದಿ ಜಾರ್ಖಂಡ್ ನ ದಿಯೋಘರ್ ವಿಮಾನ ನಿಲ್ದಾಣದಿಂದ ತೆರಳ ಬೇಕಿದ್ದ ವೇಳೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ವಿಮಾನ ಕೆಲಹೊತ್ತು ಏರ್ ಪೋರ್ಟ್ ನಲ್ಲಿಯೇ ನಿಲುಗಡೆಯಾಯಿತು. ದಿಯೋಘರ್ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ದೆಹಲಿಗೆ ತೆರಳಬೇಕಿದ್ದ ವೇಳೆ ಈ ಘಟನೆ ನಡೆದಿದೆ.

ವಿಮಾನ ಸಿಬ್ಬಂದಿಗಳು ತಾಂತ್ರಿಕ ದೋಷವನ್ನು ಸರಿಪಡಿಸಿದ ಬಳಿಕ ಪ್ರಧಾನಿ ಮೋದಿ ದೆಹಲಿಯತ್ತ ಪ್ರಯಾಣಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read