ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಭೇಟಿಯಾದ ಪ್ರಧಾನಿ ಮೋದಿ, ಅಮಿತ್ ಶಾ

ನವದೆಹಲಿ:   ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಾಜಿ ಉಪ ಪ್ರಧಾನಿ ಮತ್ತು ಹಿರಿಯ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ಭೇಟಿಯಾದರು.

ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಅವರು ನವೆಂಬರ್ 8 ರಂದು  ಅಡ್ವಾಣಿ ಅವರ ನಿವಾಸಕ್ಕೆ ಅವರ ಜನ್ಮದಿನದಂದು ಶುಭ ಕೋರಿದ್ದರು. ಮಾಜಿ ಉಪಪ್ರಧಾನಿ ಮತ್ತು ಬಿಜೆಪಿ ಮಾಜಿ ಅಧ್ಯಕ್ಷ ಎಲ್.ಕೆ.ಅಡ್ವಾಣಿ ಅವರು ನವೆಂಬರ್ 8 ರಂದು 96 ನೇ ವರ್ಷಕ್ಕೆ ಕಾಲಿಟ್ಟರು.

ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಅಡ್ವಾಣಿ ಅವರ  ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಎಲ್.ಕೆ.ಅಡ್ವಾಣಿ ಅವರೊಂದಿಗಿನ ಭೇಟಿಯ ಫೋಟೋಗಳನ್ನು ಸಹ ಅವರು ಹಂಚಿಕೊಂಡಿದ್ದಾರೆ. “ನಮ್ಮ ದೇಶವನ್ನು ಬಲಪಡಿಸಲು ನೀಡಿದ ಸ್ಮರಣೀಯ ಕೊಡುಗೆಗಳ ಸಮಗ್ರತೆ ಮತ್ತು ಸಮರ್ಪಣೆಗೆ ಅಡ್ವಾಣಿ ಬೆಳಕಾಗಿದ್ದಾರೆ” ಎಂದು ಅವರು ಮತ್ತೊಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಅಡ್ವಾಣಿ  ಅವರ ದೂರದೃಷ್ಟಿಯ ನಾಯಕತ್ವವು ರಾಷ್ಟ್ರೀಯ ಪ್ರಗತಿ ಮತ್ತು ಏಕತೆಯನ್ನು ಹೆಚ್ಚಿಸಿದೆ. ಅಡ್ವಾಣಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವಾಗಲಿ ಎಂದು ಹಾರೈಸುತ್ತೇನೆ. “ರಾಷ್ಟ್ರ ನಿರ್ಮಾಣಕ್ಕೆ ಅಡ್ವಾಣಿ ಅವರ ಕೊಡುಗೆ 140 ಕೋಟಿ ಭಾರತೀಯರಿಗೆ ಸ್ಫೂರ್ತಿಯಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read