ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜನೆಗೊಂಡಿರುವ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬಿಡನ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬಿಡನ್ ದ್ವಿಪಕ್ಷೀಯ ಸಭೆ ನಡೆಸುತ್ತಿದ್ದಾರೆ. ಪ್ರಧಾನಿ ಕಾರ್ಯಾಲಯ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ಅವರ ಚರ್ಚೆಗಳು ವಿವಿಧ ವಿಷಯಗಳನ್ನು ಒಳಗೊಂಡಿವೆ ಮತ್ತು ಭಾರತ ಮತ್ತು ಯುಎಸ್ಎ ನಡುವಿನ ಬಾಂಧವ್ಯವನ್ನು ಇನ್ನಷ್ಟು ಗಾಢವಾಗಿಸುತ್ತದೆ.
ಈ ವರ್ಷದ ಪ್ರಧಾನಿ ಮೋದಿಯವರ ಅಮೆರಿಕ ಭೇಟಿಯ ಸಂದರ್ಭದಲ್ಲಿ, ಉಭಯ ನಾಯಕರು ಜನರಲ್ ಅಟಾಮಿಕ್ಸ್ MQ-9B ಹೈ ಆಲ್ಟಿಟ್ಯೂಡ್ ಲಾಂಗ್ ಎಂಡ್ಯೂರೆನ್ಸ್(HALE) ಮಾನವರಹಿತ ವೈಮಾನಿಕ ವಾಹನಗಳನ್ನು(UAV) ಖರೀದಿಸುವ ಬಗ್ಗೆ ಚರ್ಚೆ ನಡೆಸಿದ್ದರು.
Prime Minister @narendramodi and @POTUS @JoeBiden are holding talks at 7, Lok Kalyan Marg in Delhi.
Their discussions include a wide range of issues and will further deepen the bond between India and USA. 🇮🇳 🇺🇸 pic.twitter.com/PWGBOZIwNT
— PMO India (@PMOIndia) September 8, 2023