BREAKING: ಫ್ರಾನ್ಸ್, ಅಮೆರಿಕಕ್ಕೆ ಯಶಸ್ವಿ ಭೇಟಿ ನಂತರ ದೆಹಲಿಗೆ ಆಗಮಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಮತ್ತು ಅಮೆರಿಕಕ್ಕೆ ತಮ್ಮ ಎರಡು ರಾಷ್ಟ್ರಗಳ ಭೇಟಿಯನ್ನು ಯಶಸ್ವಿಯಾಗಿ ಮುಗಿಸಿದ ನಂತರ ಶುಕ್ರವಾರ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ತಮ್ಮ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಫ್ರಾನ್ಸ್‌ ನಲ್ಲಿ ನಡೆದ AI ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದರು. ಮತ್ತು ಮಾರ್ಸಿಲ್ಲೆಯಲ್ಲಿ ಭಾರತದ ಹೊಸ ಕಾನ್ಸುಲೇಟ್ ಅನ್ನು ಮ್ಯಾಕ್ರನ್ ಅವರೊಂದಿಗೆ ಜಂಟಿಯಾಗಿ ಉದ್ಘಾಟಿಸಿದರು.

ಅಮೆರಿಕ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಗುರುವಾರ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಿದರು. ಡೊನಾಲ್ಡ್ ಟ್ರಂಪ್ ಜನವರಿ 20, 2025 ರಂದು ಅಮೆರಿಕದ 47 ನೇ ಅಧ್ಯಕ್ಷರಾಗಿ ಓವಲ್ ಕಚೇರಿಯನ್ನು ವಹಿಸಿಕೊಂಡ ನಂತರ ಇಬ್ಬರು ನಾಯಕರ ನಡುವಿನ ಮೊದಲ ಸಭೆ ಇದಾಗಿತ್ತು.

ಪ್ರಧಾನಿ ಮೋದಿ ಅವರು ವಾಷಿಂಗ್ಟನ್ ಡಿಸಿಯ ಬ್ಲೇರ್ ಹೌಸ್‌ನಲ್ಲಿ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕ್ ವಾಲ್ಟ್ಜ್, ಟೆಸ್ಲಾ ಸಿಇಒ ಎಲಾನ್ ಮಸ್ಕ್ ಮತ್ತು ಭಾರತೀಯ-ಅಮೇರಿಕನ್ ಉದ್ಯಮಿ ವಿವೇಕ್ ರಾಮಸ್ವಾಮಿ ಅವರನ್ನು ಭೇಟಿಯಾಗಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read