ವಾಷಿಂಗ್ಟನ್: ಅಮೇರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವಾಷಿಂಗ್ ಟನ್ ತಲುಪಿದ್ದು, ಅನಿವಾಸಿ ಭಾರತೀಯರು ಭರ್ಜರಿಯಾಗಿ ಸ್ವಾಗತಿಸಿದ್ದಾರೆ.
ನ್ಯೂಯಾರ್ಕ್ ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಬುಧವಾರ ವಾಷಿಂಗ್ಟನ್ ಗೆ ಆಗಮಿಸಿದರು. ಪ್ರಧಾನ ಮಂತ್ರಿಯವರಿಗೆ ಭರ್ಜರಿ ಸ್ವಾಗತ ಕೋರಿದ ನಂತರ ರಾಷ್ಟ್ರಗೀತೆಗಳನ್ನು ನುಡಿಸಲಾಯಿತು.
2023ರ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿ, ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಯೋಗ ಕಾರ್ಯಕ್ರಮ ನಡೆಯಿತು. ಯೋಗ ಕಾರ್ಯಕ್ರಮದಲ್ಲಿ ಒಟ್ಟು 180 ದೇಶಗಳ ಜನರು ಭಾಗವಹಿಸಿದ್ದರು.
https://twitter.com/ANI/status/1671577230265438208?ref_src=twsrc%5Etfw%7Ctwcamp%5Etweetembed%7Ctwterm%5E1671577230265438208%7Ctwgr%5Ee5d2e1e659b8ec30c8e9e96171c375025055e4f2%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Ftimesnownews-epaper-dhf729babb066e4159bc8e6ad4fc8cd3b9%2Fpmmodisusvisitnationalanthemsofindiausplayedatjointbaseandrewsuponpmsarrivalinwashingtonwatch-newsid-n511579528