ಸಿಜೆಐ ಚಂದ್ರಚೂಡ್ ನಿವಾಸದಲ್ಲಿ ಪ್ರಧಾನಿ ಮೋದಿ ಗಣಪತಿ ಪೂಜೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನಿವಾಸಕ್ಕೆ ಆಗಮಿಸಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡರು.

ಸಿಜೆಐ ಚಂದ್ರಚೂಡ್ ಮತ್ತು ಅವರ ಪತ್ನಿ ಮರಾಠಿ ಟೋಪಿಯನ್ನು ಅಲಂಕರಿಸಿದ ಪ್ರಧಾನಿಯನ್ನು ಸ್ವಾಗತಿಸಿದರು. ಪ್ರಧಾನಿ ಮೋದಿ ಅವರು ಗಣಪತಿಗೆ ಆರತಿ ಬೆಳಗಿದ್ದಾರೆ.

“ಸಿಜೆಐ ಡಿವೈ ಚಂದ್ರಚೂಡ್ ಜಿ ಅವರ ನಿವಾಸದಲ್ಲಿ ಗಣೇಶ ಪೂಜೆಯಲ್ಲಿ ಪಾಲ್ಗೊಂಡೆನು. ಭಗವಾನ್ ಗಣಪತಿ ನಮಗೆಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಅದ್ಭುತ ಆರೋಗ್ಯವನ್ನು ನೀಡಲಿ” ಎಂದು ಮೋದಿ ಹೇಳಿದ್ದಾರೆ.

ದೇಶಾದ್ಯಂತ ಗಣಪತಿ ಹಬ್ಬ, ಉತ್ಸವ ಆಚರಿಸಲಾಗುತ್ತಿದೆ. ಈ ವರ್ಷ ಸೆಪ್ಟೆಂಬರ್ 7 ರಿಂದ ಆರಂಭವಾಗಿರುವ ಗಣೇಶ ಉತ್ಸವ ಸೆಪ್ಟೆಂಬರ್ 16 ರವರೆಗೆ ನಡೆಯಲಿದೆ.

https://twitter.com/narendramodi/status/1833908774051926135

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read