HomeKarnatakaಇಂದೂ ಪ್ರಧಾನಿ ಮೋದಿ ಹವಾ: ಕೋಲಾರ, ಚನ್ನಪಟ್ಟಣ, ಮೈಸೂರು ಸೇರಿ ವಿವಿಧೆಡೆ ಭರ್ಜರಿ ಪ್ರಚಾರ

ಇಂದೂ ಪ್ರಧಾನಿ ಮೋದಿ ಹವಾ: ಕೋಲಾರ, ಚನ್ನಪಟ್ಟಣ, ಮೈಸೂರು ಸೇರಿ ವಿವಿಧೆಡೆ ಭರ್ಜರಿ ಪ್ರಚಾರ

ಬೆಂಗಳೂರು: ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದೂ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ನಾಳೆ ಬೆಳಗ್ಗೆ 10:35ಕ್ಕೆ ರಾಜಭವನದಿಂದ ರಸ್ತೆಯ ಮೂಲಕ ಹೆಲಿಪ್ಯಾಡ್ ಗೆ ತೆರಳುವ ಮೋದಿ ಎಂಐ 17 ಹೆಲಿಕಾಪ್ಟರ್ ನಲ್ಲಿ ಕೋಲಾರದತ್ತ ಪ್ರಯಾಣ ಬೆಳೆಸುವರು. 11:30ಕ್ಕೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. 11:30 ರಿಂದ 12.15ರವರೆಗೆ ಸಮಾವೇಶದಲ್ಲಿ ಭಾಗವಹಿಸಲಿರುವ ಅವರು ಮಧ್ಯಾಹ್ನ 12 20ಕ್ಕೆ ಸಮಾವೇಶ ಸ್ಥಳದಿಂದ ಪ್ರಯಾಣ ಬೆಳೆಸುವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಧ್ಯಾಹ್ನ 1.15ಕ್ಕೆ ಚನ್ನಪಟ್ಟಣಕ್ಕೆ ಭೇಟಿ ನೀಡಲಿದ್ದು, 1.25ಕ್ಕೆ ಸಾರ್ವಜನಿಕ ಸಮಾವೇಶದಲ್ಲಿ ಮೋದಿ ಭಾಗವಹಿಸಲಿದ್ದಾರೆ. 1:30 ರಿಂದ 2 15ರವರೆಗೆ ನಡೆಯುವ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿ ಹೆಲಿಕಾಪ್ಟರ್ ನಲ್ಲಿ ಬೇಲೂರಿನತ್ತ ಪ್ರಯಾಣ ಬೆಳೆಸುವರು. 3:40ಕ್ಕೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸುವರು.

ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಮೈಸೂರಿನತ್ತ ಪ್ರಯಾಣ ಬೆಳೆಸುವರು. ಸಂಜೆ ಮೈಸೂರಿನಲ್ಲಿ ವಿದ್ಯಾಪೀಠ ವೃತ್ತ ತಲುಪಲಿರುವ ಅವರು 5 45 ರಿಂದ 6.30 ರವರೆಗೆ ರೋಡ್ ಶೋ ನಡೆಸಲಿದ್ದಾರೆ. ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ಸೇನಾ ವಿಮಾನದಲ್ಲಿ 7 ಗಂಟೆಗೆ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular