ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಪ್ರಮುಖ ಮೂರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಕೆ.ಎಸ್.ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋ ಸಂಚಾರ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಮೆಟ್ರೋದ ೩ನೇ ಹಂತದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಧಾನಿ ಮೋದಿ ಬೆಂಗಳುರು ಭೇಟಿ ಹಿನ್ನೆಲೆಯಲ್ಲಿ ಹಲವೆಡೆ ರಸ್ತೆ ಮಾರ್ಗದಲ್ಲಿ ವಾಹ ಸಂಚಾರದಲ್ಲಿ ಭಾರಿ ಬದಲಾವಣೆಯಾಗಿದೆ. ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಮಾತ್ರವಲ್ಲ ಮೆಟ್ರೋ ಸಂಚಾರವನ್ನೂ ಕೆಲ ಮಾರ್ಗಗಳಲ್ಲಿ ನಿರ್ಬಂಧಿಸಲಾಗಿದೆ.