HomeLatest NewsBREAKING: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

BREAKING: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ನಮ್ಮ ಮೆಟ್ರೋ ಹಳದಿ ಮಾರ್ಗ, ಮೂರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಹೆಚ್ ಎ ಎಲ್ ನಿಂದ ಮೇಖ್ರಿ ಸರ್ಕಲ್ HQTC ಹೆಲಿಪ್ಯಾಡ್ ಗೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತಿಸಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಕೆ.ಎಸ್.ಆರ್. ರೈಲು ನಿಲ್ದಾಣಕ್ಕೆ ತೆರಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಎಸ್.ಆರ್ ರೈಲು ನಿಲ್ದಾಣದಿಂದ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋ ಸಂಚಾರ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular