ಬೆಂಗಳೂರು : ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ‘ಚಂದ್ರಯಾನ-3’ ಸಕ್ಸಸ್ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಚಂದ್ರಯಾನ-3ರ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ತಂದಿರುವ ನಮ್ಮ ಅಸಾಧಾರಣ ಇಸ್ರೋ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲು ಎದುರುನೋಡುತ್ತಿದ್ದೇನೆ. ಅವರ ಸಮರ್ಪಣೆ ಮತ್ತು ಉತ್ಸಾಹವು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರದ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿಗಳಾಗಿವೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ ಮಿಷನ್ ಕಂಟ್ರೋಲ್ ಕಾಂಪ್ಲೆಕ್ಸ್ನಲ್ಲಿ ಚಂದ್ರಯಾನ-3 ಮಿಷನ್ನಲ್ಲಿ ಭಾಗಿಯಾಗಿರುವ ಇಸ್ರೋ ತಂಡದ ವಿಜ್ಞಾನಿಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ.
https://twitter.com/narendramodi/status/1695234331852066857?ref_src=twsrc%5Etfw%7Ctwcamp%5Etweetembed%7Ctwterm%5E1695234331852066857%7Ctwgr%5E65f4c4bc94605c91cbf04700a5cfb54a8e3902c9%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fpm-modi-isro-visit-live-updates-narendra-modi-address-scientists-in-isro-peenya-bangalore-latest-news-653786.html