ರಾಜ್ಯದಲ್ಲಿಂದು ಪ್ರಧಾನಿ ಮೋದಿ ಹವಾ: ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆ 10 ನಿಮಿಷಕ್ಕೆ ಹೆಚ್.ಎ.ಎಲ್. ಏರ್ ಪೋರ್ಟ್ ಗೆ ಆಗಮಿಸಲಿದ್ದಾರೆ.

ನಂತರ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಬೆಳಗ್ಗೆ 10:45 ಕ್ಕೆ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟಿಸುವರು. ಮಧ್ಯಾಹ್ನ 12:55 ಕ್ಕೆ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1 ಗೆ ವೈಟ್ಫೀಲ್ಡ್ ಮೆಟ್ರೋ ಮಾರ್ಗ ಉದ್ಘಾಟಿಸಲಿದ್ದಾರೆ. ನಂತರ ಮೆಟ್ರೋದಲ್ಲಿ ಪ್ರಯಾಣ ಬೆಳೆಸಲಿದ್ದಾರೆ.

ಮಧ್ಯಾಹ್ನ 1.50ಕ್ಕೆ ಬೆಂಗಳೂರಿನಿಂದ ದಾವಣಗೆರೆಗೆ ತೆರಳಲಿದ್ದು ಮಧ್ಯಾಹ್ನ 3.30 ಕ್ಕೆ ದಾವಣಗೆರೆಯಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5:15ಕ್ಕೆ ದಾವಣಗೆರೆಯಿಂದ ಶಿವಮೊಗ್ಗಕ್ಕೆ ತೆರಳಲಿದ್ದು, ಸಂಜೆ 5.55ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಾಗಿದ್ದಾರೆ.

ವೈಟ್ಫೀಲ್ಡ್ ಮತ್ತು ಕೆಆರ್ ಪುರಂ ನಡುವಿನ ಮೆಟ್ರೋ ರೈಲಿಗೆ ಪ್ರಧಾನಿ ಚಾಲನೆ ನೀಡಲಿದ್ದು, ವೈಟ್ಫೀಲ್ಡ್ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2:30ರ ವರೆಗೆ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಕೆಲವು ಮಾರ್ಗಗಳ ಸಂಚಾರ ಬದಲಾವಣೆ ಮಾಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read