BIG NEWS: ಭಜನೆ ಮಾಡಿದವರ ಮೇಲೆ ದಾಳಿ, ಹೆಣ್ಣುಮಕ್ಕಳ ಮೇಲೂ ಹಲ್ಲೆ; ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಟ್ಯಾಕ್ಸ್ ಸಿಟಿಯನ್ನು ಟ್ಯಾಮ್ಕರ್ ಸಿಟಿಯನ್ನಾಗಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಎನ್ ಡಿಎ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಸರ್ಕರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೆಂಪೇಗೌಡರು ಬೆಂಗಳೂರನ್ನು ಅದ್ಭುತ ನಗರವನ್ನಾಗಿ ಮಾಡುವ ಕನಸು ಕಂಡಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ಹಾಳು ಮಾಡಿದೆ. ಬೆಂಗಳೂರಿನಲ್ಲಿ ಭಜನೆ ಮಾಡಿದವರ ಮೇಲೆ ಹಲ್ಲೆ ಮಾಡಲಾಗುತ್ತಿದೆ. ಬೀದಿ ಬೀದಿಗಳಲ್ಲಿ ಸ್ಫೊಟ ಸಂಭವಿಸುತ್ತುದೆ. ನಮ್ಮ ಹೆಣ್ಣುಮಕ್ಕಳ ಮೇಲೆ ಹಲ್ಲೆಯಾಗುತ್ತಿದೆ. ಈ ಎಲ್ಲಾ ಘಟನೆಗಳು ಸಾಮಾನ್ಯ ಘಟನೆಗಳಲ್ಲ ಇವೆಲ್ಲವೂ ಗಂಭೀರವಾದ ಸಂಗತಿಗಳು ಎಂದು ಕಿಡಿಕಾರಿದರು.

ಬೆಂಗಳೂರನ್ನು ಅದ್ಭುತ ನಗರವನ್ನಾಗಿ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ. ಎನ್ ಡಿಎ ಅವಧಿಯಲ್ಲಿ ತೆರಿಗೆ ಪದ್ಧತಿ ಬದಲಾವಣೆಯಾಗಿದೆ. ಜಿಎಸ್ ಟಿ ಜಾರಿ ಬಳಿಕ ಪರೋಕ್ಷ ತೆರಿಗೆ ಹೊರೆ ತಪ್ಪಿದೆ. ಭಾರತದಲ್ಲಿ ಹೂಡಿಕೆ ಮಾಡಲು ಹಲವು ದೇಶಗಳು ಕಾತರವಾಗಿವೆ. ಭಾರತ ವಿಶ್ವದ 5ನೇ ಅತಿದೊಡ್ಡ ಆರ್ಥಿಕ ದೇಶವಾಗಿ ಹೊರಹೊಮ್ಮಿದೆ. ಇಂದು ಭಾರತ ಯಾರನ್ನೂ ಅನುಸರಿಸುತ್ತಿಲ್ಲ. ಬದಲಾಗಿ ಭರತವನ್ನೇ ಹಲವು ದೇಶಗಳು ಅನುಸರಿಸುತ್ತಿವೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read