HomeKarnatakaBIG NEWS: ಇನ್ನು 4 ತಿಂಗಳಲ್ಲಿ ಮೋದಿ ಸರ್ಕಾರ ಪತನ, ರಾಹುಲ್ ಗಾಂಧಿಗೆ ಕಾದಿದೆ ಒಳ್ಳೆಯ...

BIG NEWS: ಇನ್ನು 4 ತಿಂಗಳಲ್ಲಿ ಮೋದಿ ಸರ್ಕಾರ ಪತನ, ರಾಹುಲ್ ಗಾಂಧಿಗೆ ಕಾದಿದೆ ಒಳ್ಳೆಯ ದಿನ: ಸಚಿವ ಕೆ.ಜೆ. ಜಾರ್ಜ್

ಕೋಲಾರ: 100 ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಬಿಜೆಪಿ ಹೊರಟಿದೆ. ಮೋದಿಯವರ ವರ್ಚಸ್ಸು ಈಗಾಗಲೇ ಮುಗಿದಿದ್ದು, ಇನ್ನು ನಾಲ್ಕು ತಿಂಗಳಲ್ಲಿ ಕೇಂದ್ರ ಸರ್ಕಾರ ಪತನವಾಗಲಿದೆ. ಮೋದಿ ಅಧಿಕಾರ ಕಳೆದುಕೊಳ್ಳಲಿದ್ದಾರೆ. ಮುಂದಿನ 15 ವರ್ಷ ರಾಹುಲ್ ಗಾಂಧಿಗೆ ಒಳ್ಳೆಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಗೆ ಬುದ್ದಿ ಕಲಿಸಿದ್ದಾರೆ. ದೇಶದ ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂಬುದನ್ನು ತೋರಿಸಿದ್ದಾರೆ. ಕಾಂಗ್ರೆಸ್ ಬಿಜೆಪಿಯ ರೀತಿ ಕೋಮುವಾದ, ಜಾತಿ, ಧರ್ಮಗಳ ಗಲಾಟೆಯ ಮೂಲಕ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಕೋಮು, ಜಾತಿ, ಧರ್ಮ ಆಧಾರಿತ ರಾಜಕಾರಣ ಬಹಳ ದಿನ ಉಳಿಯುವುದಿಲ್ಲ. ಜನರ ಆಶೀರ್ವಾದ ಕಾಂಗ್ರೆಸ್ ಪಕ್ಷಕ್ಕೆ ಇದ್ದು, ಕಾರ್ಯಕರ್ತರಿಗೆ ಒಳ್ಳೆಯ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಶಾಸಕರಾದ ಕೊತ್ತನೂರು ಮಂಜುನಾಥ್, ಕೆ.ವೈ. ನಂಜೇಗೌಡ, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಎಂಎಲ್ಸಿ ಅನಿಲ್ ಕುಮಾರ್ ಸೇರಿದಂತೆ ಹಲವು ಪ್ರಮುಖರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular