HomeIndiaBIG NEWS: ಇಂದು ಬಹುನಿರೀಕ್ಷಿತ ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡನೆ

BIG NEWS: ಇಂದು ಬಹುನಿರೀಕ್ಷಿತ ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ.

ಈ ಮೂಲಕ ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.

ನಿರ್ಮಲಾ ಸೀತಾರಾಮನ್ ಅವರು ಇನ್ನು ಕೇವಲ ಮೂರು ಬಜೆಟ್ ಮಂಡಿಸಿದರೆ ಒಟ್ಟು 11 ಬಜೆಟ್ ಮಂಡಿಸಿದ ಸಾರ್ವಕಾಲಿಕ ದಾಖಲೆ ಸೃಷ್ಟಿಸಲಿದ್ದಾರೆ. ಇದುವರೆಗೆ ವಿವಿಧ ಸರ್ಕಾರಗಳ ಅವಧಿಯಲ್ಲಿ 10 ಬಾರಿ ಬಜೆಟ್ ಮಂಡಿಸಿದ ಖ್ಯಾತಿಗೆ ಮಾಜಿ ಪ್ರಧಾನಿ ಮುರಾರ್ಜಿ ದೇಸಾಯಿ ಪಾತ್ರರಾಗಿದ್ದಾರೆ. ಉಳಿದಂತೆ ಪಿ. ಚಿದಂಬರಂ 9 ಬಾರಿ, ಪ್ರಣಬ್ ಮುಖರ್ಜಿ 8 ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular