HomeKarnatakaBIG NEWS: ಪ್ರಹ್ಲಾದ್ ಜೋಶಿ, ಬೊಮ್ಮಾಯಿ ಸೇರಿ ಮೋದಿ ಸಂಪುಟಕ್ಕೆ ರಾಜ್ಯದ ಐವರು ಸೇರ್ಪಡೆ ಸಾಧ್ಯತೆ

BIG NEWS: ಪ್ರಹ್ಲಾದ್ ಜೋಶಿ, ಬೊಮ್ಮಾಯಿ ಸೇರಿ ಮೋದಿ ಸಂಪುಟಕ್ಕೆ ರಾಜ್ಯದ ಐವರು ಸೇರ್ಪಡೆ ಸಾಧ್ಯತೆ

ನವದೆಹಲಿ: ಎನ್.ಡಿ.ಎ. ಮೈತ್ರಿಕೂಟದ ಪ್ರಧಾನಿಯಾಗಿ ಮೋದಿ ಇಂದು ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜ್ಯದಿಂದ ಐವರು ಮೋದಿ ಸಂಪುಟ ಸೇರುವ ಸಾಧ್ಯತೆ ಇದೆ. ರಾಜ್ಯದ ಐದು ಮಂದಿಗೆ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಹೆಚ್.ಡಿ. ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್, ಗೋವಿಂದ ಕಾರಜೋಳ ಅವರು ಮೋದಿ ಸಂಪುಟಕ್ಕೆ ಸೇರುವ ನಿರೀಕ್ಷೆ ಇದೆ.

ಕಳೆದ ಬಾರಿ ಪ್ರಹ್ಲಾದ್ ಜೋಶಿ ಸಚಿವರಾಗಿದ್ದರು. ರಾಜ್ಯವನ್ನು ಪ್ರತಿನಿಧಿಸುತ್ತಿರುವ ನಿರ್ಮಲಾ ಸೀತಾರಾಮನ್ ಕೂಡ ಕೇಂದ್ರ ಸಚಿವರಾಗಿದ್ದರು. ಈ ಬಾರಿ ಇಬ್ಬರಿಗೂ ಅವಕಾಶ ಸಿಗುವ ಸಾಧ್ಯತೆ ದಟ್ಟವಾಗಿದೆ. ಇವರೊಂದಿಗೆ ಬಿಜೆಪಿ- ಜೆಡಿಎಸ್ ಮೈತ್ರಿಕೂಟದಿಂದ ಜಯಗಳಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಗೆ ಸಚಿವ ಸ್ಥಾನ ನಡೆಸಿರುವ ನಿರೀಕ್ಷೆ ಇದೆ. ಸಂಜೆ ವೇಳೆಗೆ ಪ್ರಮಾಣವಚನ ಸ್ವೀಕಾರ ನಡೆಯಲಿದ್ದು, ಸ್ಪಷ್ಟ ಚಿತ್ರಣ ಸಿಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular