ಕನಿಷ್ಠ 21 ಜೀವಗಳನ್ನು ಬಲಿ ಪಡೆದ ಕೋಲ್ಕತ್ತಾದ ಗೋದಾಮಿನ ಅಗ್ನಿ ಅವಘಡದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಂತಾಪ ಸೂಚಿಸಿದ್ದಾರೆ. ಈ ಘಟನೆ ‘ತುಂಬಾ ದುರಂತ’ ಮತ್ತು ‘ದುಃಖಕರ’. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನ ಮಂತ್ರಿ ಮೋದಿ ಅವರು ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಇದರ ಜೊತೆಗೆ, ಗಾಯಾಳುಗಳಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ(PMO) ತಿಳಿಸಿದೆ.
ಪಶ್ಚಿಮ ಬಂಗಾಳದ ಆನಂದಪುರದಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಅವಘಡವು ತುಂಬಾ ದುರಂತ ಮತ್ತು ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎಂದು PMO ಮಾಹಿತಿ ನೀಡಿದೆ.

