ರಾಜ್ಯದಲ್ಲಿ ಇಂದು, ನಾಳೆ ಮೋದಿ ಹವಾ: 2 ದಿನದಲ್ಲಿ 8 ಕಡೆ ಬಿರುಗಾಳಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಬಾರಿ ಜೋರಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಪ್ರಚಾರ ಆರಂಭವಾಗಲಿದೆ.

ಇಂದು ಬೀದರ್ ಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಗಾವಿ ಜಿಲ್ಲೆ ಕುಡಚಿ ಹಾಗೂ ವಿಜಯಪುರದಲ್ಲಿ ನಡೆಯುವ ಸಮಾವೇಶಗಳಲ್ಲಿ ಭಾಗವಹಿಸಲಿರುವ ಮೋದಿ ಸಂಜೆ ಬೆಂಗಳೂರಿನ ಸುಂಕದಕಟ್ಟೆ ಸಮೀಪ ರೋಡ್ ಶೋ ನಡೆಸಿ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಬೆಂಗಳೂರಿನಿಂದ ಕೋಲಾರಕ್ಕೆ ತೆರಳಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಹಾಸನ ಜಿಲ್ಲೆಯ ಬೇಲೂರು, ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸಾರ್ವಜನಿಕ ಸಮಾವೇಶ, ಸಂಜೆ ಮೈಸೂರಿನಲ್ಲಿ ರೋಡ್ ಶೋ ನಡೆಸಿ ದೆಹಲಿಗೆ ವಾಪಸ್ ತೆರಳಲಿದ್ದಾರೆ.

ಒಟ್ಟು ಆರು ದಿನಗಳ ಕಾಲ ಮೋದಿ ಪ್ರವಾಸ ಕೈಗೊಂಡು 20 ಸ್ಥಳಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರು ಕಡೆ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಮೋದಿ ಅವರ ಪ್ರಚಾರ ಯಾತ್ರೆ 3 ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಇಂದು ಮತ್ತು ನಾಳೆ ರಾಜ್ಯದಲ್ಲಿ ಮೋದಿ ಬಿಜೆಪಿ ಅಭ್ಯರ್ಥಿಗಳ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read