HomeKarnatakaಬಿಜೆಪಿ ಅಭ್ಯರ್ಥಿಗೆ ಕ್ರಿಮಿನಲ್ ಹಿನ್ನೆಲೆ: ಮೋದಿ ಪ್ರಚಾರ ರದ್ದು

ಬಿಜೆಪಿ ಅಭ್ಯರ್ಥಿಗೆ ಕ್ರಿಮಿನಲ್ ಹಿನ್ನೆಲೆ: ಮೋದಿ ಪ್ರಚಾರ ರದ್ದು

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ರಿಮಿನಲ್ ಹಿನ್ನೆಲೆ ಹೊಂದಿದ ಹಿನ್ನೆಲೆಯಲ್ಲಿ ವಿಪಕ್ಷಗಳಿಂದ ತೀವ್ರ ಟೀಕೆ ಎದುರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮೇ 6 ರಂದು ಚಿತ್ತಾಪುರದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆ ರದ್ದಾಗಿದೆ ಎಂದು ಹೇಳಲಾಗಿದೆ.

ಕ್ರಿಮಿನಲ್ ಹಿನ್ನೆಲೆಯ ಅನೇಕ ಪ್ರಕರಣ ಹೊಂದಿರುವ ಅಭ್ಯರ್ಥಿಗೆ ಟಿಕೆಟ್ ನೀಡಿದ ಬಗ್ಗೆ ವಿಪಕ್ಷಗಳು ಬಿಜೆಪಿ ವಿರುದ್ಧ ಮುಗಿಬಿದ್ದಿದ್ದವು. ಈ ಹಿನ್ನೆಲೆಯಲ್ಲಿ ಮೇ 6ರಂದು ಚಿತ್ತಾಪುರ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ ರದ್ದಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಚಿತ್ತಾಪುರ ಕ್ಷೇತ್ರದಲ್ಲಿ ಮೇ 6ರಂದು ನಡೆಸಲು ಉದ್ದೇಶಿಸಿದ್ದ ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆ ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಪ್ರಧಾನಿ ಮೋದಿ ರಾಜ್ಯ ಭೇಟಿಯ ವೇಳೆ ರೌಡಿ ಶೀಟರ್ ಗಳು ಕಾಣಿಸಿಕೊಂಡ ಬಗ್ಗೆ ಕಾಂಗ್ರೆಸ್ ನಾಯಕರು ಟೀಕಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular