HomeKarnatakaರಾಜ್ಯದಲ್ಲಿಂದು ಮತ್ತೆ ಮೋದಿ ಹವಾ: ಇಂದು, ನಾಳೆ ವಿವಿಧೆಡೆ ಅಬ್ಬರದ ಪ್ರಚಾರ

ರಾಜ್ಯದಲ್ಲಿಂದು ಮತ್ತೆ ಮೋದಿ ಹವಾ: ಇಂದು, ನಾಳೆ ವಿವಿಧೆಡೆ ಅಬ್ಬರದ ಪ್ರಚಾರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಎರಡನೇ ಹಂತದ ಪ್ರಚಾರ ಕೈಗೊಂಡಿದ್ದಾರೆ.

ಇಂದು ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರ್ಗಿ, ನಾಳೆ ಮೂಡಬಿದರೆ, ಅಂಕೋಲಾ, ಬೈಲಹೊಂಗಲದಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿರುವ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸುವರು. 6.30 ಕ್ಕೆ ಕಲಬುರ್ಗಿಯಲ್ಲಿ ರೋಡ್ ಶೋ ನಡೆಸಿ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿರುವ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆಯುವ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular