BREAKING : ಕರ್ನೂಲ್ ಖಾಸಗಿ ಬಸ್ ‘ಅಗ್ನಿ ದುರಂತ’ಕ್ಕೆ ಪ್ರಧಾನಿ ಮೋದಿ ಕಂಬನಿ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಣೆ.!


ದುನಿಯಾ ಡಿಜಿಟಲ್ ಡೆಸ್ಕ್ : ಆಂಧ್ರಪ್ರದೇಶದಲ್ಲಿ ನಡೆದ ಖಾಸಗಿ ಬಸ್ ಅಗ್ನಿ ದುರಂತ ಕೇಸ್ ಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘೋಷಣೆ ಮಾಡಲಾಗಿದೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತುಂಬಾ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಬೆಳಗಿನ ಜಾವ 42 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read